ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮೂರು ದಿನ ಶೋಕ: ಬಿಎಸ್‌ ಯಡಿಯೂರಪ್ಪ ಆದೇಶ

Last Updated 29 ಡಿಸೆಂಬರ್ 2019, 4:18 IST
ಅಕ್ಷರ ಗಾತ್ರ

ಉಡುಪಿ: ಯಡಿಯೂರಪ್ಪ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು. ತಮ್ಮ ಮತ್ತು ಸ್ವಾಮೀಜಿ ಒಡನಾಟ ನೆನಪಿಸಿಕೊಂಡು ಭಾವುಕರಾದ ಯಡಿಯೂರಪ್ಪ, ‘ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ’ ಎಂದು ಹೇಳಿದರು.

‘ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ’ ಎಂದು ವಿಷಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT