ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀಗೆ ಶ್ವಾಸಕೋಶ ಸೋಂಕು: ಪರಿಸ್ಥಿತಿ ಸ್ಥಿರ, ಕೆಎಂಸಿ ವೈದ್ಯರಿಂದ ಮಾಹಿತಿ

Last Updated 24 ಡಿಸೆಂಬರ್ 2019, 8:04 IST
ಅಕ್ಷರ ಗಾತ್ರ

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರುಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ತುಂಬಾ ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯರಾದ ಸತ್ಯನಾರಾಯಣ ತಿಳಿಸಿದರು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವೈದ್ಯರು, ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ಆರೋಗ್ಯಸ್ಥಿತಿ ಗಂಭೀರವಾಗಿಯೇ ಇದೆ. ವಯಸ್ಸಿನ ಕಾರಣಕ್ಕೆ ಚಿಕಿತ್ಸೆಗೆ ನಿಧಾನಗತಿಯ ಸ್ಪಂದನೆ ಸಿಗುತ್ತಿದೆ ಎಂದರು.

ಸ್ಕ್ಯಾನಿಂಗ್, ಎಕ್ಸ್‌ರೇ, ಎಂಆರ್‌ಐ, ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಚಿಕಿತ್ಸಾ ಕ್ರಮಗಳ ಕುರಿತು ದೆಹಲಿಯ ಏಮ್ಸ್‌ ವೈದ್ಯರ ಜತೆಗೆ ಗಂಟೆಗೊಮ್ಮೆ ಮಾಹಿತಿ ವಿನಿಮಯ ನಡೆಯುತ್ತಿದೆ. ಇಲ್ಲಿನ ಚಿಕಿತ್ಸೆಯ ಬಗ್ಗೆ ಏಮ್ಸ್‌ ವೈದ್ಯರಿಗೆ ಸಹಮತ ಇದೆ ಎಂದು ತಿಳಿಸಿದರು.

ಸ್ವಾಮೀಜಿ ಆಸ್ಪತ್ರೆಗೆ ದಾಖಲಾದಾಗ ನ್ಯುಮೋನಿಯಾ ಸೇರಿ ಹಲವು ತೆರೆನಾದ ಸಮಸ್ಯೆಗಳು ಕಂಡುಬಂದಿತ್ತು. ಈಗ ಶ್ವಾಸಕೋಶ ಸೋಂಕು ಹೊರತುಪಡಿಸಿ ಬೇರೆ ಸಮಸ್ಯೆಗಳು ಇಲ್ಲ. ಸಂಪೂರ್ಣ ಚೇತರಿಕೆವರೆಗೂ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT