ಬಿಜೆಪಿ ತಿರಸ್ಕರಿಸಲು ಜನರು ನಿರ್ಧರಿಸಿದ್ದಾರೆ: ಸಿದ್ದರಾಮಯ್ಯ

7

ಬಿಜೆಪಿ ತಿರಸ್ಕರಿಸಲು ಜನರು ನಿರ್ಧರಿಸಿದ್ದಾರೆ: ಸಿದ್ದರಾಮಯ್ಯ

Published:
Updated:

ಗದಗ: ‘ಈಶ್ವರಪ್ಪ ಮಹಾನ್ ಪೆದ್ದ. ತಲೆಯಲ್ಲಿ ಮಿದುಳಿಲ್ಲದಿರೋ ವ್ಯಕ್ತಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ಈಶ್ವರಪ್ಪ ಮೇಲೆ ಹರಿಹಾಯ್ದರು.

ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ನನಗೆ ಅಹಿಂದ ನಾಯಕ ಎಂದು ಯಾವುದಾದರೂ ಯುನಿವರ್ಸಿಟಿ ಸರ್ಟಿಫಿಕೇಟ್ ಕೊಟ್ಟಿದೆಯೇ’ ಎಂದು ಪ್ರಶ್ನಿಸಿದರು.

‘ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಿದ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು. ‘ಬಿಜೆಪಿ ವರ್ಚಸ್ಸು ಹಾಳು ಮಾಡಲು ಕಾಂಗ್ರೆಸ್ ಈ ರೀತಿ ಕುತಂತ್ರ ಮಾಡುತ್ತಿದೆ’ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿ, ‘ರೆಡ್ಡಿ ಬಿಜೆಪಿಯಲ್ಲಿಲ್ಲ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಹೀಗಾಗಿ ರೆಡ್ಡಿ ಆರೋಪಕ್ಕೆ ಅರ್ಥ ಇಲ್ಲ’ ಎಂದರು.

‘ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್ ಭಾರೀ ಅಂತರದಿಂದ ಜಯಗಳಿಸಿದೆ. ಬಿಜೆಪಿಯನ್ನು ಜನರು ತಿರಸ್ಕರಿಸಲು ತೀರ್ಮಾನ ಮಾಡಿದ್ದಾರೆ ಎಂಬುದನ್ನು ಇದೂ ತೋರಿಸುತ್ತದೆ’ ಎಂದು ವಿಶ್ಲೇಷಿಸಿದರು.

ಬರಹ ಇಷ್ಟವಾಯಿತೆ?

 • 18

  Happy
 • 2

  Amused
 • 0

  Sad
 • 2

  Frustrated
 • 7

  Angry

Comments:

0 comments

Write the first review for this !