ಭಾನುವಾರ, ಜೂಲೈ 5, 2020
27 °C

ಕ್ವಾರಂಟೈನ್ ಕೇಂದ್ರಗಳಿಂದ 15 ಸಾವಿರಕ್ಕೂ ಹೆಚ್ಚು ಜನರು ಮನೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕ್ವಾರಂಟೈನ್‌ ಕೇಂದ್ರಗಳಲ್ಲಿ ವಾರಕ್ಕಿಂತ ಹೆಚ್ಚು ದಿನಗಳಿಂದ ವಾಸವಿದ್ದವರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಿಂದ ಶುಕ್ರವಾರ ಜನರನ್ನು ಬಿಡುಗಡೆ ಮಾಡಲಾಯಿತು.

ರಾಯಚೂರು ಜಿಲ್ಲೆಯ 169 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 10,537 ಪೈಕಿ 3,980 ಜನರು ಬಿಡುಗಡೆಯಾಗಿದ್ದಾರೆ. 44 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಮುಚ್ಚಲಾಗಿದ್ದು, ಸದ್ಯಕ್ಕೆ 125 ಕ್ವಾರಂಟೈನ್ ಕೇಂದ್ರಗಳಲ್ಲಿ 6,557 ಜನರಿದ್ದಾರೆ. 3,315 ಪುರುಷರು ಮತ್ತು 3,242 ಮಹಿಳೆಯರು ಇದ್ದಾರೆ. ರಾಯಚೂರು ತಾಲ್ಲೂಕಿನಲ್ಲೇ ಅತಿ ಹೆಚ್ಚು 41 ಕ್ವಾರಂಟೈನ್ ಕೇಂದ್ರಗಳಿದ್ದು, 3006 ಜನರಿದ್ದಾರೆ.

ಬೀದರ್ ಜಿಲ್ಲೆಯಲ್ಲಿನ 635 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 3068 ಪೈಕಿ 2648 ಜನರು ಬಿಡುಗಡೆಯಾಗಿದ್ದಾರೆ. ಶುಕ್ರವಾರ ಒಂದೇ ದಿನ 256 ಜನರು ಬಿಡುಗಡೆಯಾಗಿದ್ದು, ಮನೆಗೆ ಕಳುಹಿಸುವ ಮುನ್ನ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಯಿತು.  

ಯಾದಗಿರಿ ಜಿಲ್ಲೆಯ 224 ಕ್ವಾರಂಟೈನ್ ಕೇಂದ್ರಗಳಲ್ಲಿ 14,643 ಜನರಿದ್ದಾರೆ. ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ಬಿಡುಗಡೆ ಮಾಡಲಾಗಿದೆ. 

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ 36 ಜನರನ್ನು ಬಿಡುಗಡೆ ಮಾಡಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು