ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಪಿಇಎಸ್‌ ವಿವಿಯಿಂದ ₹5 ಕೋಟಿ ದೇಣಿಗೆ

ರಾಜ್ಯ ಹಾಗೂ ಕೇಂದ್ರ ಪರಿಹಾರ ನಿಧಿಗಳಿಗೆ
Last Updated 3 ಏಪ್ರಿಲ್ 2020, 20:49 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಪಿಇಎಸ್ ವಿಶ್ವವಿದ್ಯಾಲಯವು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹3 ಕೋಟಿ ಹಾಗೂ ಪಿಎಂ ಕೇರ್ಸ್‌ಗೆ ₹2 ಕೋಟಿ ದೇಣಿಗೆ ನೀಡಿದೆ.

ಶುಕ್ರವಾರ ಇಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್.ದೊರೆಸ್ವಾಮಿ ಮತ್ತು ಸಮ ಕುಲಾಧಿಪತಿ ಪ್ರೊ.ಡಿ.ಜವಾಹರ್ ಅವರು ಒಟ್ಟು ₹5 ಕೋಟಿಗಳ ಚೆಕ್‌ಗಳನ್ನು
ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌.ಅಶೋಕ ಇದ್ದರು.

‘ಕೊರೊನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಕೈಬಲಪಡಿಸುವ ಸಣ್ಣ ಪ್ರಯತ್ನ ಇದು. ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಸಿಟಿ ಕ್ಯಾಂಪಸ್ ಮತ್ತು ರಿಂಗ್‌ರೋಡ್‌ ಕ್ಯಾಂಪಸ್‌ಗಳಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡಲು ಬಂದಿರುವ ನೆರೆಯ ರಾಜ್ಯಗಳ ಎಲ್ಲ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲಾಗಿದೆ’ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT