ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ಹೋರಾಟಕ್ಕೆ ಪಿಎಫ್‌ಐ ಹಣ, ತನಿಖೆಯಾಗಲಿ: ಸಿದ್ದರಾಮಯ್ಯ

Last Updated 28 ಜನವರಿ 2020, 19:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಹೋರಾಟಗಳಿಗೆ ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾದಿಂದ (ಪಿಎಫ್‌ಐ) ಹಣ ಸಂದಾಯವಾಗಿದೆ ಎನ್ನುವ ವಿಷಯದ ಬಗ್ಗೆ ಸಮಗ್ರ ತನಿಖೆಯಾಗಲಿ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಹಣ ಎಲ್ಲಿಂದ ಹಾಗೂ ಹೇಗೆ ಬಂತು ಎನ್ನುವುದರ ಬಗ್ಗೆ ತನಿಖೆ ನಡೆಯಬೇಕು. ಹೊರ ದೇಶಗಳಿಂದ ಅಕ್ರಮವಾಗಿ ಹಣ ಬಂದಿದ್ದರೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಬೇಕು’ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ ‘ಆಸೆ ತೋರಿಸಿ ಪಕ್ಷಕ್ಕೆ ಸೇರಿಸಿಕೊಂಡವರಿಗೆ ಸಚಿವ ಸ್ಥಾನ ನೀಡಲಾಗದೇ, ಯಡಿಯೂರಪ್ಪ ವಿಲಿವಿಲಿ ಒದ್ದಾಡುತ್ತಿದ್ದಾರೆ. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗೆ ಇರುವ ಪರಮಾಧಿಕಾರ. ಆದರೆ, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವೆಂಬುದೇ ಇಲ್ಲ. ಅಧಿಕಾರ ಚಲಾಯಿಸಲು ಸ್ವತಂತ್ರವೇ ಇಲ್ಲದಂತಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT