ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ತಡೆ ಕೋರಿ ಪಿಐಎಲ್ ಸಲ್ಲಿಕೆ

Last Updated 20 ಮೇ 2020, 21:40 IST
ಅಕ್ಷರ ಗಾತ್ರ

ಬೆಂಗಳೂರು: ಜೂನ್ 25 ರಿಂದ ನಡೆಸಲು ಉದ್ದೇಶಿಸಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಈ ಕುರಿತಂತೆ ವಕೀಲರಾದ ಎಂ. ಲೋಕೇಶ್, ಯು‌.ಟಿ. ಪ್ರಶಾಂತ್ ಹಾಗೂ ಎಂ.ಕೆ. ಪೃಥ್ವೀಶ್ ಸಲ್ಲಿಸಿರುವ ಈ ಅರ್ಜಿಯನ್ನು ಇದೇ 27ಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿದೆ. ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ‌ ಮಂಡಳಿಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿಯಲ್ಲಿ ಏನಿದೆ?

- ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ.

- ಈ ಸಂದರ್ಭದಲ್ಲಿ 2019-2020ನೇ ಶೈಕ್ಷಣಿಕ ಸಾಲಿನ ಪರೀಕ್ಷೆ ನಡೆಸುವುದು ಸೂಕ್ತವಲ್ಲ.

- ಪರೀಕ್ಷೆಗೆ ಮುಂದಾದರೆ ಸೋಂಕು ಮಕ್ಕಳಿಗೂ ಹರಡುವ ಸಾಧ್ಯತೆ ಇದೆ.

- ಆದ್ದರಿಂದ, ವಿದ್ಯಾರ್ಥಿಗಳು ಈ ಬಾರಿ ಪೂರ್ವಭಾವಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನೇ ಆಧರಿಸಿ ಉತ್ತೀರ್ಣಗೊಳಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT