ಭಾನುವಾರ, ಜನವರಿ 19, 2020
24 °C

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಎಂ. ಸುಧೀಂದ್ರರಾವ್ ಅವರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಎಂ. ಸುಧೀಂದ್ರರಾವ್ ಹಾಗೂ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

‘ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಎಂ. ಸುಧೀಂದ್ರರಾವ್ ನೇಮಕಕ್ಕೆ ತಡೆ ನೀಡಬೇಕು’ ಎಂದು ಕೋರಲಾಗಿದೆ.

ವಕೀಲ ಎಸ್.ಉಮಾಪತಿ ಅರ್ಜಿ ಸಲ್ಲಿಸಿದ್ದು, ಸಿ.ಜೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ನ್ಯಾಯಪೀಠ, ಈ ಸಂಬಂಧಿತ ಮತ್ತೊಂದು ಅರ್ಜಿ ಜೊತೆ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು