ಕೊಡಗಿನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯ ನೆರವು: ಮೋದಿ ಟ್ವೀಟ್‌

7

ಕೊಡಗಿನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯ ನೆರವು: ಮೋದಿ ಟ್ವೀಟ್‌

Published:
Updated:

ನವದೆಹಲಿ/ಬೆಂಗಳೂರು: ಮಳೆ ಅವಾಂತರಕ್ಕೆ ನಲುಗಿರುವ ಕೊಡಗಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯ ನೆರವು ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ನರೇಂದ್ರ ಮೋದಿ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದಿದ್ದಾರೆ. ಕೇಂದ್ರ ಸರ್ಕಾರ ಪರಿಹಾರ ಕಾರ್ಯಗಳಿಗೆ ಎಲ್ಲ ರೀತಿಯ ಅಗತ್ಯ ನೆರವು ನೀಡುವುದಾಗಿ ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿರುವ ಬಗ್ಗೆ ಮೋದಿ ಟ್ವೀಟ್‌ ಮಾಡಿದ್ದಾರೆ. 

ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು,  ಸೇನಾ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು 3500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು  ಮುಂದುವರೆಸಲಾಗಿದೆ  ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. 

 ಪರಿಹಾರ ಕಾರ್ಯಗಳ ಪರಾಮರ್ಶೆ:  ಇಂದು ಮಡಿಕೇರಿಯಲ್ಲಿ ಕುಮಾರಸ್ವಾಮಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಗಳ ಪರಾಮರ್ಶೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !