ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ: ಮೋದಿಯಿಂದ ದಿಟ್ಟ ನಿರ್ಧಾರ ಎಂದ ಸಚಿವೆ ಜೊಲ್ಲೆ

Last Updated 24 ಡಿಸೆಂಬರ್ 2019, 7:43 IST
ಅಕ್ಷರ ಗಾತ್ರ

ಕಲಬುರ್ಗಿ: ಸ್ವಾತಂತ್ರ್ಯ ಬಂದ ಬಳಿಕ ಯಾವ ಸರ್ಕಾರವೂ ಕೈಗೊಳ್ಳದ ದಿಟ್ಟ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತ್ರಿವಳಿ ತಲಾಖ್, ಜಮ್ಮು ಕಾಶ್ಮೀರದಲ್ಲಿನ 370 ಕಲಂ ರದ್ದತಿ, ಎನ್‌ಆರ್‌ಸಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಇವೆಲ್ಲವೂ ಬಹಳ ವರ್ಷಗಳ ಹಿಂದೆಯೇ ಆಗಬೇಕಿತ್ತು ಎಂದರು.

ವಿರೋಧ ಪಕ್ಷಗಳಿಂದ ಗೊಂದಲ: ಪೌರತ್ವ ಕಾಯ್ದೆ ವಿಚಾರದಲ್ಲಿ ವಿರೋಧ ಪಕ್ಷಗಳು ಅನಗತ್ಯವಾಗಿ ಜನರಲ್ಲಿ ಗೊಂದಲ ಮೂಡಿಸುತ್ತಿವೆ. ಈ ಬಗ್ಗೆ ಪ್ರಧಾನಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.

ಮಾನವೀಯ ನೆಲೆಯಲ್ಲಿ ಪರಿಹಾರ: ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ನಲ್ಲಿ ಬಲಿಯಾದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ನಂತರ ಪರಿಹಾರ ಘೋಷಿಸಿದ್ದು ಸರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜೊಲ್ಲೆ, ಮಾನವೀಯ ನೆಲೆಯಲ್ಲಿ ತಕ್ಷಣದ ಪರಿಹಾರವಾಗಿ ಹಣ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT