ಜ. 2ರಂದು ಕಿಸಾನ್ ಸಮ್ಮಾನ್ 4ನೇ ಕಂತಿನ ಹಣ ಬಿಡುಗಡೆ; ಸಿದ್ಧಗಂಗಾ ಮಠಕ್ಕೆ ಭೇಟಿ
ತುಮಕೂರಿನ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಜ.2 ರಂದು ತುಮಕೂರಿನಲ್ಲಿ ನಡೆಯುವ ಬೃಹತ್ ರೈತ ಸಮಾವೇಶಕ್ಕೆ ಆಗಮಿಸುತ್ತಿದ್ದು, ಅಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆಯಲಿದ್ದಾರೆ.
ಸಮಾವೇಶ ನಡೆಯುವ ಸ್ಥಳ ಪರಿಶೀಲಿಸಿದ ಬಳಿಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಸೋಮಣ್ಣ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿಯವರು ಅಂದು ಮಧ್ಯಾಹ್ನ 2.10ಕ್ಕೆ ತುಮಕೂರಿಗೆ ಬರಲಿದ್ದಾರೆ. ಮೊದಲು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವರು. ಬಳಿಕ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ ಮಾಡುವರು ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.