ಮಂಗಳವಾರ, ಜನವರಿ 21, 2020
28 °C

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ನಗರದ ಮೂಲಕ ಪ್ರವಾಸ ಆರಂಭಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಯಲಹಂಕ ವಾಯುಪಡೆಯ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದು, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು, ರೈತರ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಬೆಂಗಳೂರಿಗೆ ವಾಪಸಾಗಲಿದ್ದು, ಡಿಆರ್‌ಡಿಒ ಏರ್ಪಡಿಸಿರುವ ಯುವ ವಿಜ್ಞಾನಿಗಳ ಸಮ್ಮೇಳನದಲ್ಲಿ ಭಾಗವಹಿಸುವರು.

ಜ. 3ರಂದು ಕೃಷಿ ವಿಶ್ವವಿದ್ಯಾಲಯದಲ್ಲಿ ‘ವಿಜ್ಞಾನ ಕಾಂಗ್ರೆಸ್’ ಸಮಾವೇಶಕ್ಕೆ ಚಾಲನೆ ನೀಡುವರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು