ಸೋಮವಾರ, ಮೇ 25, 2020
27 °C

ಮೂವರು ಪಾದ್ರಿಗಳ ವಿರುದ್ಧ ಪೋಕ್ಸೊ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಮೈಸೂರು: ದಲಿತ ಸಮುದಾಯಕ್ಕೆ ಸೇರಿದ ನಗರದ ಬಾಲಕಿಯೊಬ್ಬಳಿಗೆ ಕೆಲಸದ ಆಮಿಷವೊಡ್ಡಿ ಮಂಗಳೂರಿಗೆ ಕರೆದುಕೊಂಡು ಹೋದ ಮೂವರು ಪಾದ್ರಿಗಳು ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ದಾಖಲಾಗಿದೆ.

‘ಮನೆ ನಿರ್ಮಿಸಲು ಹಣ ಕೊಡುತ್ತೇವೆ, ನರ್ಸಿಂಗ್‌ ಕೆಲಸ ಕೊಡಿಸುತ್ತೇವೆ ಎಂದು ಆಮಿಷ ಒಡ್ಡಿದ ಮಂಗಳೂರಿನ ಈ ಪಾದ್ರಿಗಳು 16 ವರ್ಷದ ಬಾಲಕಿಯನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಕರೆದುಕೊಂಡು ಹೋಗಿದ್ದರು. ಆದರೆ, ಅಲ್ಲಿ ಬಾಲಕಿಯನ್ನು ಮನೆಗೆಲಸಕ್ಕೆ ಇರಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಹಾಗೂ ಜಾತಿನಿಂದನೆ ಮಾಡಿದ್ದಾರೆ’ ಎಂದು ಬಾಲಕಿ ತಾಯಿ ಹೈಕೋರ್ಟ್‌ಗೆ ದೂರು ಸಲ್ಲಿಸಿದ್ದರು.

ಈ ದೂರನ್ನು ಸ್ವೀಕರಿಸಿದ ಹೈಕೋರ್ಟ್‌ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನಗರ ಪೊಲೀಸರಿಗೆ ಸೂಚಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಗೆ ಬಾಲಕಿ ತಾಯಿ ವಾಸವಿರುವ ಮನೆ ಇನ್ನೂ ಸಿಕ್ಕಿಲ್ಲ. ಒಂದು ತಂಡ ಮಂಗಳೂರಿಗೆ ತನಿಖೆಗಾಗಿ ತೆರಳಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು