ಮಂಗಳವಾರ, ಆಗಸ್ಟ್ 3, 2021
22 °C

ಬಂಟ್ವಾಳ: ಪೊಲೀಸರ ಮೇಲೆ ಹಲ್ಲೆ, ಜೀವ ಬೆದರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಇಲ್ಲಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಶುಕ್ರವಾರ ರಾತ್ರಿ ಸುಮಾರು 10 ಗಂಟೆಗೆ ಸ್ಥಳೀಯ ನಾಗರಿಕರೊಂದಿಗೆ ಘರ್ಷಣೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಗೋಳ್ತಮಜಲು ನಿವಾಸಿ, ಲಾರಿ ಚಾಲಕ ಅಬ್ದುಲ್ ಸಲಾಂ ಎಂಬಾತನು ಮೆಲ್ಕಾರ್‌‌ನಲ್ಲಿ ನಾಗರಿಕರೊಂದಿಗೆ ಘರ್ಷಣೆ ನಡೆಸುತ್ತಿದ್ದ. ಈ ಸುದ್ದಿ ತಿಳಿದು ಭೇಟಿ ನೀಡಿದ ಪೊಲೀಸರು ಆತನನ್ನು ತಡೆದು ಬಂಧಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಯು  ಕಬ್ಬಿಣದ ರಾಡ್ ನಿಂದ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್ ವಾಹನಕ್ಕೂ ಹಾನಿಗೊಳಿಸಿದ್ದಾನೆ. ಬಳಿಕ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಗಾಯಾಳು ಎ.ಎಸೈ ಶೈಲೇಶ್ ಮತ್ತು ಸಿಬ್ಬಂದಿ ದೇವಪ್ಪ, ಮಲ್ಲಕ್ ಸಾಬ್, ಹಾಗೂ ಜೀಪು ಚಾಲಕ ನಿರಂಜನ್ ಬಂಟ್ವಾಳ ಸಕಾ೯ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಎಸ್ಪಿ ಬಿ.ಎಂ. ಲಕ್ಷ್ಮಿಪ್ರಸಾದ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು