ಮಂಗಳವಾರ, ಏಪ್ರಿಲ್ 7, 2020
19 °C
ವೈದ್ಯಕೀಯ ನಿಗಾ ಘಟಕದಿಂದ ಊರಿಗೆ ಮರಳಿದ್ದ ವ್ಯಕ್ತಿ

ಸೋಂಕು ಶಂಕಿತ ವ್ಯಕ್ತಿಯನ್ನು ಕರೆತಂದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ನಿಗಾ ಘಟಕದಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕು ಶಂಕಿತ ವ್ಯಕ್ತಿಯೊಬ್ಬನನ್ನು ಇಂದಿರಾನಗರ ಠಾಣೆಯ ಪೊಲೀಸರು ಮನವೊಲಿಸಿ ನಗರಕ್ಕೆ ಮರಳಿ ಕರೆದುಕೊಂಡು ಬರುವಲ್ಲಿ ಯಶಸ್ವಿ ಆಗಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಿಡ್ಡರಾವ್ ಎಂಬವರನ್ನು ಕರೆದುಕೊಂಡು ಬಂದಿದ್ದು, ಸರ್ ಸಿ.ವಿ. ರಾಮನ್‌ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ವಿದೇಶದಿಂದ ಬಂದಿದ್ದ ಗಿಡ್ಡರಾವ್ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿತ್ತು. ಸೋಂಕು ಶಂಕಿತ ಎಂಬ ಕಾರಣಕ್ಕೆ ಇಂದಿರಾನಗರದ ಸಿ.ವಿ. ರಾಮನ್‌ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವೈದ್ಯಕೀಯ ನಿಗಾ ಘಟಕದಲ್ಲಿ ಇಡಲಾಗಿತ್ತು.

ಆದರೆ, ಮಂಗಳವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವೈದ್ಯಕೀಯ ಪರೀಕ್ಷೆಯ ಬಳಿಕ ತನಗೆ ಸೋಂಕು ಇಲ್ಲ ಎಂದು ಭಾವಿಸಿ ಆತ ಊರಿಗೆ ಮರಳಿದ್ದ. ಈ ಮಾಹಿತಿ ಪಡೆದ ಇಂದಿರಾಗನಗರ ಪೊಲೀಸರು ಅನಂತಪುರ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿಯೇ ಪೊಲೀಸರ ತಂಡ ಅಲ್ಲಿಗೆ ತೆರಳಿ ಅವರನ್ನು ಮನವೊಲಿಸಿ ಕರೆದುಕೊಂಡು ಬಂದಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)