ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಕೋವಿಡ್‌

Last Updated 17 ಏಪ್ರಿಲ್ 2020, 15:43 IST
ಅಕ್ಷರ ಗಾತ್ರ

ವಿಜಯಪುರ: ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಕೋವಿಡ್‌ 19–ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ಹೇಳಿದರು.

ನಗರದಲ್ಲಿ ಈಗಾಗಲೇ ಕೋವಿಡ್‌–19ರಿಂದ ಮೃತಪಟ್ಟಿರುವ ರೋಗಿ(ಪಿ257)ಯೊಂದಿಗೆ ಮಹಾರಾಷ್ಟ್ರದ ಇಚಲಕರಂಜಿಗೆ ಶವಸಂಸ್ಕಾರಕ್ಕೆ ಹೋಗಿದ್ದ ವ್ಯಕ್ತಿ(ಪಿ306)ಯ ಸಂ‍ಪರ್ಕದಿಂದ ಪೊಲೀಸ್ ಕಾನ್‌ಸ್ಟೆಬಲ್‌ಗೆ ತಗುಲಿದೆ. ಇವರಿಬ್ಬರು ಅಪ್ಪ–ಮಗ ಆಗಿದ್ದಾರೆ ಎಂದು ತಿಳಿಸಿದರು.

ಪೊಲೀಸ್‌ ಕಾನ್‌ಸ್ಟೆಬಲ್‌ ಕ್ಯಾನ್ಸರ್‌ ಪೀಡಿತರಾಗಿದ್ದು, ಈಗಾಗಲೇ ರಜೆಯಲ್ಲಿದ್ದಾರೆ. ಆದರೆ, ಕೋವಿಡ್‌–19 ಪತ್ತೆಯಾಗುವುದಕ್ಕೂ ಮುನ್ನಾ ಅವರು ಪೊಲೀಸ್‌ ಕಚೇರಿಗೆ ಬಂದು ಹೋಗಿರುವುದರಿಂದ ಅವರ ಸಂಪರ್ಕಕ್ಕೆ ಬಂದಿದ್ದ ಹಲವು ಸಿಬ್ಬಂದಿಯನ್ನೂ ಕ್ವಾರಂಟೈನ್‌ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT