ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿತನ ಕಡೆಗಣನೆ ಚರ್ಚೆಗೆ ಗ್ರಾಸ

Last Updated 1 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ) ನೇಮಕಾತಿಯಲ್ಲಿ ಸೇವಾ ಹಿರಿತನ ಕಡೆಗಣಿಸಿರುವ ಆರೋಪ ವ್ಯಕ್ತವಾದ ಬೆನ್ನಲ್ಲೇ, ರಾಜ್ಯ ಸರ್ಕಾರದ ಆದೇಶದ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ.

ರಾಜ್ಯದ ನೂತನ ಡಿಜಿ ಆಗಿ ಪ್ರವೀಣ್ ಸೂದ್ ಅವರು ಶುಕ್ರವಾರವಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಸೇವಾ ಹಿರಿತನದಲ್ಲಿ ಮೊದಲಿಗರಾಗಿದ್ದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್ ಅವರು ಗೃಹ ರಕ್ಷಕ ದಳದ ಡಿಜಿಪಿ ಆಗಿ ವರ್ಗವಾಗಿದ್ದಾರೆ.

ಸರ್ಕಾರದ ಆದೇಶ ಪ್ರಶ್ನಿಸಿ ಪ್ರಸಾದ್‌ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಲಿದ್ದಾರೆ ಎಂಬ ಚರ್ಚೆಯೂ ಇಲಾಖಾ ವಲಯ ದಲ್ಲಿ ನಡೆಯುತ್ತಿದೆ. ಈ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಪ್ರಸಾದ್, ‘ಸದ್ಯಕ್ಕೆ ಅಂಥದ್ದೇನೂ ಇಲ್ಲ. ಈ ಬಗ್ಗೆ ಹೆಚ್ಚು ಮಾತನಾಡಲಾರೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT