ಕಲಬುರ್ಗಿ: ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

7

ಕಲಬುರ್ಗಿ: ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

Published:
Updated:

ಕಲಬುರ್ಗಿ: ಯುವಕನ ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿ ನಾಗರಾಜ ಅಲಿಯಾಸ್ ನಾಗ್ಯಾನ ಮೇಲೆ ಭಾನುವಾರ ಬೆಳಿಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಆರೋಪಿಯು ಆಳಂದ ರಸ್ತೆಯ ಕೆರಿಭೋಸಗಾ ಬಳಿ ಇರುವ ಖಚಿತ ಮಾಹಿತಿ ಆಧರಿಸಿ ಬ್ರಹ್ಮಪುರ ಠಾಣೆ ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಕಾನ್‌ಸ್ಟೆಬಲ್‌ಗಳಾದ ಸಿದ್ದರಾಜು ಮತ್ತು ರಮೇಶ್‌ ಅವರಿಗೆ ಗಾಯಗಳಾಗಿದ್ದು, ಅವರನ್ನು ಬಸವೇಶ್ವರ ಆಸ್ಪತ್ರೆಗೆ ಹಾಗೂ ಆರೋಪಿ ನಾಗರಾಜನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭವಾನಿ ನಗರದ ಸಿದ್ದೋಜಿ ಭೋಸಲೆ (30) ಎಂಬಾತನನ್ನು ಸೆ.11ರಂದು ಅಪಹರಿಸಿದ್ದ ಆರೋಪಿ ತಾಲ್ಲೂಕಿನ ಆಲಗೂಡ ಗ್ರಾಮದ ಹೊರ ವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ. ಬಳಿಕ ರುಂಡವನ್ನು ತೆಗೆದುಕೊಂಡು ಕೆರಿಭೋಸಗಾ ಬಳಿಯ ನಿರ್ಜನ ಪ್ರದೇಶದಲ್ಲಿ ಬಿಸಾಕಿದ್ದ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ತೆರಳಿ ಗಾಯಾಳು ಕಾನ್ ಸ್ಟೆಬಲ್ ಗಳ ಆರೋಗ್ಯ ವಿಚಾರಿಸಿದರು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !