ಸೋಮವಾರ, ಆಗಸ್ಟ್ 2, 2021
25 °C
ಪೊಲೀಸ್ ವಸತಿ ಗೃಹ, ಸಂಚಾರಿ ಪೊಲೀಸ್ ಠಾಣೆ, ವೈರ್‌ಲೆಸ್ ತರಬೇತಿ ಶಾಲೆ ಉದ್ಘಾಟಿಸಿದ ಸಿಎಂ

ಈ ವರ್ಷ ಪೊಲೀಸರಿಗೆ 11 ಸಾವಿರ ವಸತಿಗೃಹ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಪೊಲೀಸರು ಮತ್ತು ಪೊಲೀಸ್ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿರ್ಮಿಸಲಾಗುತ್ತಿರುವ 11 ಸಾವಿರ ವಸತಿಗೃಹಗಳನ್ನು ಈ ವರ್ಷವೇ ಪೂರ್ಣಗೊಳಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು

ಅವರು ಶುಕ್ರವಾರ ಬೆಂಗಳೂರು ನಗರವ್ಯಾಪ್ತಿಯಲ್ಲಿ ನಿರ್ಮಿಸಿರುವ ಪೊಲೀಸ್ ವಸತಿಗೃಹ, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‌ಲೆಸ್ ತರಬೇತಿ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು.

2025ರ ವೇಳೆಗೆ ಇನ್ನೂ 10 ಸಾವಿರ ವಸತಿಗೃಹಗಳ ನಿರ್ಮಾಣ ಕಾರ್ಯಕ್ಕೆ ಈಗಿನಿಂದಲೇ ಸಿದ್ಧತೆ ಅರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಅದಕ್ಕಾಗಿ ಐದು ವರ್ಷಗಳಲ್ಲಿ ₹2,200 ಕೋಟಿ ಒದಗಿಸಲಾಗುವುದು ಎಂದರು.

ಬಾಡಿಗೆ ಕಟ್ಟಡದಲ್ಲಿರುವ ಹಾಗೂ ಶಿಥಿಲವಾಗಿರುವ ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡ ನಿರ್ಮಿಸಲು ಸೂಚಿಸಲಾಗಿದೆ. ಇದಕ್ಕೆ ಬಜೆಟ್‌ನಲ್ಲಿ ಸಾಕಷ್ಟು ಹಣ ಒದಗಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಉತ್ತಮ ಮೂಲಸೌಲಭ್ಯ ಒದಗಿಸಲು ಸೂಚಿಸಲಾಗಿದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು