ಶನಿವಾರ, ಜುಲೈ 31, 2021
27 °C
₹ 7 ಕೋಟಿ ಬಿಡುಗಡೆ

ಪ್ರತಿ ಪೊಲೀಸ್‌ ಠಾಣೆಗಳಲ್ಲಿ ಮಹಿಳಾ ಹೆಲ್ಪ್‌ ಡೆಸ್ಕ್: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರ ನಿರ್ಭಯಾ ಯೋಜನೆಯಡಿ ಈಗಾಗಲೇ ನೀಡಿರುವ ₹ 282 ಕೋಟಿಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಗಾಗಿ ರಾಜ್ಯದ ಪೊಲೀಸ್‌ ಠಾಣೆಗಳಲ್ಲಿ ಹೆಲ್ಪ್ ಡೆಸ್ಕ್‌ ಆರಂಭಿಸಲು ರಾಜ್ಯ ಸರ್ಕಾರ ₹ 7 ಕೋಟಿ ಬಿಡುಗಡೆ ಮಾಡಿದೆ.

ಪ್ರತಿ ಪೊಲೀಸ್‌ ಠಾಣೆಗೆ ₹ 1 ಲಕ್ಷದಂತೆ 700 ಪೊಲೀಸ್‌ ಠಾಣೆಗಳಿಗೆ ಈ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರತಿ ನಗರದಲ್ಲಿ (ಬೆಂಗಳೂರು ಹೊರತುಪಡಿಸಿ) ಕಾನೂನು ಸುವ್ಯವಸ್ಥೆ ಪೊಲೀಸ್‌ ಠಾಣೆಗಳಲ್ಲಿ ಮಹಿಳಾ ಹೆಲ್ಪ್‌ ಡೆಸ್ಕ್‌ ಆರಂಭಿಸಲು ಖರೀದಿಸಬೇಕಾದ ವಾಹನಗಳು ಮತ್ತು ಉಪಕರಣಗಳ ಪಟ್ಟಿ ಸಹಿತ ಅನುದಾನ ಬಿಡುಗಡೆ ಮಾಡುವಂತೆ ಪೊಲೀಸ್‌ ಮಹಾನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು