'ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿರುವ ರಾಜಕಾರಣಿಗಳು ಕೂಡಲೇ ರಾಜೀನಾಮೆ ಕೊಡಬೇಕು'

7

'ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿರುವ ರಾಜಕಾರಣಿಗಳು ಕೂಡಲೇ ರಾಜೀನಾಮೆ ಕೊಡಬೇಕು'

Published:
Updated:

ಬೆಂಗಳೂರು: ಕಬ್ಬಿಗೆ 3600 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಈ ಬಗ್ಗೆ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ನಿರ್ದೇಶನ ಕೊಡಬೇಕು ಎಂದು ಕರ್ನಾಟಕ ರೈತ ಸೇನೆ ಮುಖಂಡ ಶಂಕರೇಗೌಡ ಆಗ್ರಹಿಸಿದರು.

'ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಉಗ್ರ ಹೋರಾಟ ‌ಮಾಡಬೇಕಾಗುತ್ತದೆ' ಎಂದರು.

‘ರೈತರ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಈ ರೀತಿ ಮಾತನಾಡಬಾರದು. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.

'ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿರುವ ರಾಜಕಾರಣಿಗಳು ಕೂಡಲೇ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರು ಬಾಕಿ ಹಣ ಪಾವತಿ ಮಾಡಿದ ನಂತರ ತಮ್ಮ ಸ್ಥಾನದಲ್ಲಿ ಮುಂದುವರಿಯಬೇಕು' ಎಂದರು.

‘ಯಾವುದೇ ಕಾರಣಕ್ಕೂ ಸರ್ಕಾರ ರಾಜಕಾರಣಿಗಳನ್ನು ‌ಬಚಾವ್ ಮಾಡುವುದಕ್ಕೆ ಹೋಗಬಾರದು. ರಾಜಕಾರಣಿಗಳಿಂದ ರೈತರಿಗೆ ಆಗುವ ಅನ್ಯಾಯವನ್ನು ಸರಿಪಡಿಸಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 22

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !