ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಭಾರ ಕುಸಿತ: ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ

Last Updated 31 ಮೇ 2020, 15:19 IST
ಅಕ್ಷರ ಗಾತ್ರ

ಮಡಿಕೇರಿ: ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಇದರ ಪರಿಣಾಮದಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಜೂನ್‌ 1ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ: 08272 221077, ವಾಟ್ಸ್‌ಆ್ಯಪ್‌ 8550001077 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT