ಸೋಮವಾರ, ಏಪ್ರಿಲ್ 6, 2020
19 °C
ಎಟಿಎಂಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿ

ಅಧಿವೇಶನ ಮುಂದೂಡಿ: ಎಚ್‌ಡಿಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಹರಡುವಿಕೆ ತಡೆಗಟ್ಟಲು ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನರಿಗೆ ಸೂಚಿಸಿರುವ ಸರ್ಕಾರ ವಿಧಾನಮಂಡಲ ಅಧಿವೇಶನವನ್ನು ತಕ್ಷಣವೇ ಮುಂದೂಡಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ಸರ್ಕಾರ ಹೇಳುತ್ತಿದೆ. ಹಾಗಿರುವಾಗ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಒಂದೇ ಕಡೆ ಕಲೆಯುವ ಅಧಿವೇಶನ ನಡೆಸುವುದು ಸದ್ಯದ ಪರಿಸ್ಥಿತಿಯಲ್ಲಿ ಸರಿಯಲ್ಲ. ಸರ್ಕಾರ ಹೇಳುವುದೊಂದು ಮಾಡುವುದೊಂದು ಎಂಬ ಟೀಕೆಗೆ ಗುರಿಯಾಗುವ ಮುನ್ನ ಅಧಿವೇಶನ ಮುಂದೂಡುವ ಕೆಲಸ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಎಟಿಎಂಗಳಿಗೆ ಸುರಕ್ಷೆ: ಜನರು ಹಣ ಪಡೆಯಲು ಬಳಸುವ ಎಟಿಎಂಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಇಲ್ಲವಾಗಿದೆ. ಎಲ್ಲ ನೂರಾರು ಜನ ಗ್ರಾಹಕರು ಬಂದು ಹೋಗುವ ಈ ಎಟಿಎಂಗಳಲ್ಲಿ ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಇಡಲು ಕ್ರಮವಹಿಸಬೇಕು. ಈ ಬಗ್ಗೆ ಬ್ಯಾಂಕ್‌ಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು