ಸಂಪುಟ ವಿಸ್ತರಣೆ ಮುಂದೂಡಿಕೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

7

ಸಂಪುಟ ವಿಸ್ತರಣೆ ಮುಂದೂಡಿಕೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

Published:
Updated:

ಬೆಂಗಳೂರು: ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನೆಪದಲ್ಲಿ ಸಂಪುಟ ವಿಸ್ತರಣೆ ಮುಂದೂಡಿಕೆಗೆ ಕಾಂಗ್ರೆಸ್‌ನಲ್ಲಿ ಆಕ್ರೋಶ ಭುಗಿಲೆದ್ದಿದೆ.

ಪಕ್ಷದ ನಾಯಕರ ವಿರುದ್ಧವೇ ಅತೃಪ್ತ ಶಾಸಕರು ತಿರುಗಿಬಿದ್ದಿದ್ದಾರೆ. ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಪರಮೇಶ್ವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್ ನಲ್ಲಿ ಆಕ್ರೋಶ ಹೊರಹಾಕಿರುವ ಹಿರೇಕೆರೂರು ಕ್ಷೇತ್ರದ ಕೈ ಶಾಸಕ ಬಿ.ಸಿ. ಪಾಟೀಲ, ಪದೇ ಪದೇ ಸಂಪುಟ ವಿಸ್ತರಣೆಗೆ ನೆಪ ಹುಡುಕಲಾಗುತ್ತಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಂಪುಟ ವಿಸ್ತರಣೆ ಮುಂದೂಡುವ ಮೂಲಕ ಶಾಸಕರಿಗೆ ಅವಮಾನ ಮಾಡಲಾಗಿದೆ.ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ ಎಂದು ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 11

  Happy
 • 3

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !