ಗುರುವಾರ , ಮಾರ್ಚ್ 4, 2021
20 °C

ಫ್ಲಿಪ್‌ ಕಾರ್ಟ್ ಮತ್ತು ಗಿವ್ ಇಂಡಿಯಾದಿಂದ ಪಿಪಿಇ ಕಿಟ್ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದ ಪ್ರಮುಖ ಇ-ಕಾಮರ್ಸ್ ಕಂಪೆನಿ ಫ್ಲಿಪ್ ಕಾರ್ಟ್ ಹಾಗೂ ಗಿವ್ ಇಂಡಿಯಾ ಸಂಸ್ಥೆಯವರು ಶುಕ್ರವಾರ ಪಿಪಿಇ ಕಿಟ್‌ಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ‘ಕೋವಿಡ್–19 ಸೋಂಕು ಹರಡುವುದನ್ನು ತಡೆಗಟ್ಟಲು ಹಾಗೂ ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಜನತೆಗೆ ಎಲ್ಲ ರೀತಿಯ ನೆರವು ನೀಡಲು ಸಮರೋಪಾದಿಯಲ್ಲಿ ಶ್ರಮಿಸುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳು ಮತ್ತು ಇತರ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ. ಫ್ಲಿಪ್ ಕಾರ್ಟ್ ಹಾಗೂ ಗಿವ್ ಇಂಡಿಯಾ ಸಂಸ್ಥೆಯವರು 2 ಲಕ್ಷ ಪಿಪಿಇ ಕಿಟ್‌ಗಳನ್ನು ವಿತರಿಸಲು ಸಮ್ಮತಿಸಿದ್ದು, ಇಂದು 70500 ಪಿಪಿಇ ಕಿಟ್‌ಗಳನ್ನು ನೀಡಿರುವುದು ರಾಜ್ಯದ ಆರೋಗ್ಯ ಕಾರ್ಯಕರ್ತರಿಗೆ ನೆರವಾಗಲಿದೆ ಎಂದು ತಿಳಿಸಿದರು. 

ಫ್ಲಿಪ್ ಕಾರ್ಟ್ ಸಂಸ್ಥೆಯ ಸಿಇಓ ಕಲ್ಯಾಣ್ ಕೃಷ್ಣಮೂರ್ತಿ ಅವರು ಮಾತನಾಡಿ, ‘ರಾಜ್ಯ ಸರ್ಕಾರ ಕೋವಿಡ್–19 ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳ ಪುನರಾರಂಭಕ್ಕೆ ವಹಿಸಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಫ್ಲಿಪ್ ಕಾರ್ಟ್ ಬೆಂಗಳೂರು ಮೂಲದ ಕಂಪೆನಿಯಾಗಿದೆ. ಆದ್ದರಿಂದ ರಾಜ್ಯದ ಕೋವಿಡ್ ನಿಯಂತ್ರಣದ ಪ್ರಯತ್ನಗಳಲ್ಲಿ ಕೈಜೋಡಿಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಫ್ಲಿಪ್ ಕಾರ್ಟ್ ಕಂಪೆನಿಯ ನೀಲ್ ಕ್ಯಾಸ್ಟಲಿನೊ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು