ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ಸಿಎಂ ಯಡಿಯೂರಪ್ಪ ಅಭಿನಂದನೆ

Last Updated 26 ಮಾರ್ಚ್ 2020, 11:07 IST
ಅಕ್ಷರ ಗಾತ್ರ

ಬೆಂಗಳೂರು:ಕೋವಿಡ್-19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ₹1.70 ಲಕ್ಷ ಕೋಟಿ ಹಣ ಬಿಡುಗಡೆ ಮಾಡಿದ್ದು,ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಅವರಿಗೆಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರವು ಬಡವರನ್ನು ರೈತರನ್ನು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರನ್ನು ನೆಮ್ಮದಿಯಾಗಿ ಬದುಕಲು ಅನುವು ಮಾಡಿಕೊಡುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19ರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಹೆಚ್ಚು ಗಂಭೀರವಾಗಿ ಮತ್ತು ಚುರುಕಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗುತ್ತದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ...3 ತಿಂಗಳ ವರೆಗೂ ಜನ ಧನ್‌ ಖಾತೆಗೆ ₹500, ಹೆಚ್ಚುವರಿಯಾಗಿ 5ಕೆ.ಜಿ. ಅಕ್ಕಿ

ಬಡವರ ಹಸಿವಿನ ಅರ್ಥ ಅರಿತುಕೊಂಡುಕೇಂದ್ರ ಸರ್ಕಾರ80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಗೋಧಿ ಅಥವಾ ಅಕ್ಕಿ ಮತ್ತು 1 ಕೆ.ಜಿ. ಬೇಳೆಯನ್ನು ಕೊಡಲು ನಿರ್ಧರಿಸಿದ್ದು ಒಂದು ದೊಡ್ಡ ಅಸಾಧಾರಣ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಮಹಿಳೆಯರ ಜನಧನ್ ಖಾತೆಗೆ ಪ್ರತಿ ತಿಂಗಳು ₹500ರಂತೆ 3 ತಿಂಗಳಿಗೆ ₹1500 ಹಣವನ್ನುಮುಂಗಡವಾಗಿ ವರ್ಗಾವಣೆ ಮಾಡುವುದು, ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿನ ₹2,000 ಹಣವನ್ನು ಮುಂಗಡವಾಗಿ ಕೊಡುವುದು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಯೋಜನೆ ₹10 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದು, ಇದರಿಂದ 63 ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ಲಾಭವಾಗಲಿದೆ ಎಂದರು.

8.3 ಕೋಟಿ ಗೃಹಿಣಿಯರಿಗೆ ಉಜ್ವಲ್ ಯೋಜನೆ ಅಡಿ 3 ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದು, ಸಂಘಟಿತ ವಲಯದ ಕಾರ್ಮಿಕರಿಗೆ ಇಪಿಎಫ್ಮೇಲೆ ಸಾಲ ಸೌಲಭ್ಯ ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಅಡಿ ಕೂಲಿ ದರವನ್ನು ₹182 ರಿಂದ ₹202ಕ್ಕೆ ಏರಿಸಿದ್ದು, ದೇಶದ ಬಡವರು ಇಂತಹ ಸಂದಿಗ್ಧ ಸಮಯದಲ್ಲಿ ಹಸಿವಿನಿಂದ ಬಳಲದಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ವಯೋವೃದ್ಧರಿಗೆ, ವಿಧವೆಯರಿಗೆ ₹1000ಗೌರವಧನವನ್ನು 3 ತಿಂಗಳವರೆಗೆ ಕೊಡುವುದು ಉತ್ತಮನಿರ್ಧಾರ. ಇದಲ್ಲದೇ ಕೇಂದ್ರ ಸರ್ಕಾರದಿಂದ ಉದ್ಯಮ ವಲಯಕ್ಕೆ ಹಲವಾರು ಹಣಕಾಸು ಸಹಾಯಕ ಯೋಜನೆಗಳನ್ನು ಕೊಡಮಾಡಿ ಕೋವಿಡ್-19 ಮಹಾಮಾರಿಯ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮುಖ್ಯಾಂಶಗಳು | ಯಾರನ್ನೂ ಹಸಿವಿನಿಂದ ಬಳಲಲು ಬಿಡುವುದಿಲ್ಲ: ನಿರ್ಮಲಾ ಸೀತಾರಾಮನ್‌

ಬಡವರಿಗೆ ಇಷ್ಟೊಂದು ದೊಡ್ಡಮಟ್ಟದ ಹಣಕಾಸು ಸಹಾಯ ಮಾಡಿದ ಪ್ರಧಾನಿನರೇಂದ್ರಮೋದಿಯವರಿಗೆ ಇನ್ನೊಮ್ಮೆ ಅಭಿನಂದಿಸುತ್ತೇನೆಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT