ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಸರ್ಕಾರದ ಅಸ್ಥಿರತೆಯ ಹಿಂದೆ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ ಜೋಶಿ 

Last Updated 6 ಜುಲೈ 2019, 6:48 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮೈತ್ರಿ ಸರ್ಕಾರದ ಅಸ್ಥಿರತೆಯ ಹಿಂದೆ ಸಿದ್ದರಾಮಯ್ಯ ಕೈವಾಡವಿದ್ದು, ದೇವೇಗೌಡರ ಕುಟುಂಬ ಅಧಿಕಾರದಲ್ಲಿರೋದು ಅವರಿಗೆ ಇಷ್ಟವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಶಾಸಕರ ರಾಜೀನಾಮೆ, ಕಾಂಗ್ರೆಸ್ ಮುಖಂಡರ ಹೇಳಿಕೆಗಳ ಹಿಂದಿನ ಸೂತ್ರದಾರ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರ ಅವರಿಗೆ ನಾಯಕತ್ವ ಸಿಗುತ್ತಿದೆ ಎಂಬ ಆತಂಕ ಅವರಿಗಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರ ಬಜೆಟ್ ಪ್ರತಿಕ್ರಿಯೆಗೆ ಪ್ರತಿಕ್ರಿಯಿಸಿದ ಅವರು, ಕೃಷಿ ಕ್ಷೇತ್ರವನ್ನು ಕಡೆಗಣಿಸಿಲ್ಲ, ಅವರು ಬಜೆಟ್ ಪೂರ್ಣವಾಗಿ ಓದಿಲ್ಲ ಎಂದು ಭಾವಿಸಿದ್ದೇನೆ ಎಂದರು.

ಉದ್ಯೋಗ ಖಾತ್ರಿ‌ ಯೋಜನೆಗೆ 60 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಯುಪಿಎ ಸರ್ಕಾರ ಇದ್ದಾಗ 46 ಸಾವಿರ ಕೋಟಿ ನೀಡಿದ್ದರು‌ ಎಂದರು.

ಮುಂದಿನ 10 ವರ್ಷ ದೇಶ ಯಾವದಿಕ್ಕಿನಲ್ಲಿ ನಡೆಯಬೇಕು ಎಂಬುದನ್ನು ಬಜೆಟ್ ಬಿಂಬಿಸುತ್ತಿದೆ. ಇದೊಂದು ದೂರದೃಷ್ಟಿಯ ಬಜೆಟ್. ಸಾಮಾನ್ಯ ಜನರನ್ನ ದೃಷ್ಟಿಯಲ್ಲಿಟ್ಟುಕೊಂಡ ಬಜೆಟ್ ರೂಪಿಸಲಾಗಿದೆ‌ ಎಂದುಪ್ರಹ್ಲಾದ ಜೋಶಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT