ಸುಗಮ ಕಲಾಪ: ಪ್ರತಿ ಪಕ್ಷಗಳು ಸಹಕರಿಸಲಿ: ಪ್ರಹ್ಲಾದ ಜೋಶಿ

ಭಾನುವಾರ, ಜೂನ್ 16, 2019
26 °C
ಕೊಯ್ನಾದಿಂದ ಕೃಷ್ಣಾಗೆ ನೀರು ಹರಿಸಲು ಮಹಾರಾಷ್ಟ್ರ ಸಿ.ಎಂ ಜತೆ ಚರ್ಚಿಸುವೆ

ಸುಗಮ ಕಲಾಪ: ಪ್ರತಿ ಪಕ್ಷಗಳು ಸಹಕರಿಸಲಿ: ಪ್ರಹ್ಲಾದ ಜೋಶಿ

Published:
Updated:
Prajavani

ಹುಬ್ಬಳ್ಳಿ: ದೇಶದ ಬಹುಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಸತ್‌ನಲ್ಲಿ ಗುಣಾತ್ಮಕ ಚರ್ಚೆಗಳು ನಡೆಯ ಬೇಕಿದ್ದು, ಅದಕ್ಕೆ ಎಲ್ಲ ವಿರೋಧ ಪಕ್ಷಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದರು.

ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ತವರು ಜಿಲ್ಲೆಗೆ ಬಂದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಸುದೀರ್ಘ 40 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದೆ. ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಜನರು ನಿರೀಕ್ಷಿಸಿದ್ದಾರೆ. ಅದಕ್ಕೆ ತಕ್ಕಂತೆ ವಿರೋಧ ಪಕ್ಷಗಳು ಸಹಕಾರ ನೀಡಬೇಕು. ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ತಯಾರಿದೆ. ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ಹಿರಿಯ ಮುಖಂಡರನ್ನು ಖುದ್ದಾಗಿ ಭೇಟಿಯಾಗಿ ಸಹಕಾರ ಕೋರುತ್ತೇನೆ’ ಎಂದು ಅವರು ತಿಳಿಸಿದರು.

‘ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ. ಸಚಿವ ಡಿ.ಕೆ. ಶಿವಕುಮಾರ್ ಅವರು ಬರುವುದಾದರೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸುತ್ತೇನೆ. ನೀರಿಗೆ ಬದಲಾಗಿ ನೀರು ಬಿಡಬೇಕು ಎಂಬುದು ಮಹಾರಾಷ್ಟ್ರದ ಬೇಡಿಕೆಯಾಗಿದೆ. ಆ ಬಗ್ಗೆ ಒಪ್ಪಂದ ಆಗಬೇಕು ಎಂದು ಅವರು ಹೇಳುತ್ತಾರೆ. ಈ ಎಲ್ಲ ವಿಷಯಗಳನ್ನು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬದ್ಧನಿದ್ದೇನೆ. ಈ ವಿಷಯದಲ್ಲಿ ಕರ್ನಾಟಕ ಸರ್ಕಾರ ಸಹ ಸ್ಪಂದಿಸುವ ಅಗತ್ಯವಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಅತಿ  ಹೆಚ್ಚು ಕಲ್ಲಿದ್ದಲು ಮೀಸಲು ಹೊಂದಿರುವ ವಿಶ್ವದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ ಎರಡನೇ ಸ್ಥಾನವಿದೆ. ಆದರೆ, ನೀತಿ ನಿರೂಪಣೆಯಲ್ಲಿನ ಲೋಪದಿಂದಾಗಿ ದೇಶದಲ್ಲಿ ಒಟ್ಟು 2 ಲಕ್ಷ ಮಿಲಿಯನ್ ಟನ್ ಕಲ್ಲಿದ್ದಲಿನ ಕೊರತೆ ಇದೆ.

ದೇಶದಲ್ಲಿ ಶೇ 84ರಷ್ಟು ಸರಾಸರಿ ಸಂಗ್ರಹವಿದ್ದರೆ, ರಾಜ್ಯದಲ್ಲಿ ಶೇ 86ರಷ್ಟು ಅಂದರೆ, ಶೇ2ರಷ್ಟು ಹೆಚ್ಚಾಗಿದೆ. ಕಲ್ಲಿದ್ದಲು ಕೊರತೆ ನಿವಾರಿಸಲು ಇರುವ ಅಡೆತಡೆಗಳನ್ನು ನಿವಾರಿಸಿ, ಸಂಗ್ರಹ ಪ್ರಮಾಣ ಶೇ 100ರಷ್ಟು ಮುಟ್ಟಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !