ಗುರುವಾರ , ಡಿಸೆಂಬರ್ 12, 2019
17 °C

ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪುಲ್ವಾಮ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುವ ಮೂಲಕ ಅದ್ಭುತ ಕೆಲಸ ಮಾಡಿದೆ. ವಾಯು ದಾಳಿ ನಡೆಸುವ‌ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಭಾರತದ ತಂಟೆಗೆ ಬರದೆ ಇನ್ನಾದರೂ ತೆಪ್ಪಗಿರಲಿ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಭಾರತದೊಂದಿಗೆ ನೇರ ಯುದ್ಧ ಮಾಡಲಾಗದ ಪಾಕಿಸ್ತಾನ ಉಗ್ರರ ಮೂಲಕ ವಿದ್ವಂಸಕ ಕೃತ್ಯ ನಡೆಸುತ್ತಿದೆ. ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಸಂಪೂರ್ಣ ಹಕ್ಕು ನಮಗಿದೆ. ಹಿಂದೆ ಸಹ ಸರ್ಜಿಕಲ್‌ ಸ್ಟ್ರೈಕ್ ನಡೆಸಲಾಗಿತ್ತು ಎಂದರು.

ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡುವುದಾಗಿ ಪ್ರಧಾನಿ ಹೇಳಿದ್ದರು. ಅದರ ಪರಿಣಾಮ ಈಗ ಕಾಣಬಹುದು. ಪಾಕಿಸ್ತಾನ ಈಗಲಾದರೂ ಬುದ್ಧಿ ಕಲಿಯದಿದ್ದರೆ ವಿಶ್ವದ ಭೂಪಟದಿಂದ ನಾಶವಾಗಲಿದೆ ಎಂದರು.

ಇದನ್ನೂ ಓದಿ: ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ಎಲ್ಒಸಿ ದಾಟಿ ಹೋಗಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರವನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ ಎಂದರು.

ದೇಶದ ಜನರು ಬೆಂಬಲ ನೀಡುವ ಮೂಲಕ ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು