ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಫೋನ್ಇನ್ | ಕರೆ ಮಾಡಿ ಕೊರೊನಾ ವೈರಸ್ ಬಗೆಗಿನ ಗೊಂದಲ ನಿವಾರಿಸಿಕೊಳ್ಳಿ

Last Updated 18 ಮಾರ್ಚ್ 2020, 4:18 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು:ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವಕೋವಿಡ್‌–19ನಿಂದಾಗಿ ಭಾರತದಲ್ಲಿ ಮೂವರು ಮೃತಪಟ್ಟಿದ್ದಾರೆ. 137 ಜನರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಕರ್ನಾಟಕದಲ್ಲಿ ಒಟ್ಟು 11 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ.ಹೀಗಾಗಿ ಜನರಲ್ಲಿ ಸಹಜವಾಗಿಯೇ ಈ ಸೋಂಕಿನ ಬಗ್ಗೆ ಆತಂಕ ಆವರಿಸಿದೆ.ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆಯಾದರೂ, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಸೋಂಕಿನ ಲಕ್ಷಣಗಳ ಕುರಿತುಆರೋಗ್ಯ ಇಲಾಖೆಯುಈಗಾಗಲೇ ಮಾಹಿತಿಯನ್ನು ನೀಡಿದೆ. ಆದರೂ ಜನರಲ್ಲಿ ಗೊಂದಲಗಳು ಉಳಿದಿವೆ.ಇದಕ್ಕಾಗಿ ಪ್ರಜಾವಾಣಿ ಫೆಸ್‌ಬುಕ್‌ ಲೈವ್‌ ಫೋನ್‌ಇನ್‌ ಕಾರ್ಯಕ್ರಮ ಆಯೋಜಿಸಿದೆ.

ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಲೈವ್‌ ಕಾರ್ಯಕ್ರಮದಲ್ಲಿ ಮಾಹಿತಿ ಹಂಚಿಕೊಳ್ಳಲು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ ಮತ್ತು ಆರೋಗ್ಯ) ಡಾ.ರವಿಕುಮಾರ್‌ ಸುರಪುರ್‌ ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?, ಸೋಂಕಿನ ಲಕ್ಷಣಗಳು ಕಂಡುಬಂದರೆ ಏನು ಮಾಡಬೇಕು?, ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ? ಸ್ಯಾನಿಟೈಸರ್‌ ಮತ್ತು ಮಾಸ್ಕ್‌ ಬಳಸುವುದು ಹೇಗೆ? ಹಾಗೂ ನಿಮ್ಮಲ್ಲಿರುವ ಮತ್ತಷ್ಟು ಪ್ರಶ್ನೆಗಳನ್ನು ಕೇಳಿ ಗೊಂದಲ ನಿವಾರಿಸಿಕೊಳ್ಳಿ.

ದೂರವಾಣಿ ಸಂಖ್ಯೆ: 08045557230
ಸಮಯ: ಬೆಳಗ್ಗೆ 11 ಗಂಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT