ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಪ್ಲೊಮಾ: ಸಿಇಟಿ ದಿನಾಂಕ ಬದಲು

‘ಪ್ರಜಾವಾಣಿ’ ವರದಿಗೆ ಸ್ಪಂದಿಸಿದ ಕೆಇಎ
Last Updated 1 ಜೂನ್ 2019, 18:44 IST
ಅಕ್ಷರ ಗಾತ್ರ

ದಾವಣಗೆರೆ: ‘ನಾಟ’ ಪರೀಕ್ಷೆಯ ದಿನವೇ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಇಟಿ ನಡೆಸಲು ನಿಗದಿ ಮಾಡಿದ್ದ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)
ಬದಲಾಯಿಸಿದ್ದು, ಜುಲೈ 7ರ ಬದಲು ಜುಲೈ 14ಕ್ಕೆ ಪರೀಕ್ಷೆ ನಿಗದಿಗೊಳಿಸಿದೆ.

ಜುಲೈ 7ರಂದು ‘ನಾಟ’ (ನ್ಯಾಷನಲ್‌ ಆ್ಯಪ್ಟಿಟ್ಯೂಡ್‌ ಆಫ್‌ ಟೆಸ್ಟ್‌ ಇನ್‌ ಆರ್ಕಿಟೆಕ್ಚರ್‌) ಪರೀಕ್ಷೆ ನಡೆಸಲು ನವದೆಹಲಿಯ ಕೌನ್ಸಿಲ್‌ ಆಫ್‌ ಆರ್ಕಿಟೆಕ್ಚರ್‌ ಅಧಿಸೂಚನೆ ಹೊರಡಿಸಿತ್ತು. ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್‌ ಪ್ರವೇಶ ಯೋಜನೆಯಡಿ ಅದೇ ದಿನ ಸಿಇಟಿ ನಡೆಸಲು ಕೆಇಎ ನಿರ್ಧರಿಸಿತ್ತು. ಎರಡೂ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿತ್ತು. ಈ ಬಗ್ಗೆ ‘ನಾಟ, ಸಿಇಟಿ ಪರೀಕ್ಷೆ ಒಂದೇ ದಿನ ನಿಗದಿ’ ಎಂಬ ವರದಿಯನ್ನು ಮೇ 28ರಂದು ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗಲಿದ್ದ ಸಮಸ್ಯೆ ಬಗ್ಗೆ ‘ಪ್ರಜಾವಾಣಿ’ ಬೆಳಕು ಚೆಲ್ಲಿತ್ತು.

ಈ ವರದಿಗೆ ಸ್ಪಂದಿಸಿರುವ ಕೆಇಎ, ಮೇ 31ರಂದು ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. 14ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ 180 ಅಂಕಗಳ ಪರೀಕ್ಷೆ ಹಾಗೂ ಮಧ್ಯಾಹ್ನ 3ರಿಂದ 4ರವರೆಗೆ ಹೊರನಾಡ ಮತ್ತು ಗಡಿನಾಡ ಕನ್ನಡಿಗರಿಗೆ 50 ಅಂಕಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ದಿನಾಂಕ ಬದಲಾವಣೆ ಮಾಡಿರುವುದರಿಂದ ಹಲವು ವಿದ್ಯಾರ್ಥಿಗಳಿಗೆ ಎರಡೂ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT