ಭಾನುವಾರ, ಸೆಪ್ಟೆಂಬರ್ 22, 2019
27 °C

ಪ್ರಜ್ವಲ್‌ ರೇವಣ್ಣ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

Published:
Updated:
Prajavani

ಬೆಂಗಳೂರು: ‘ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಬೇಕು ಎಂದು ಕೋರಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 6ಕ್ಕೆ ಮುಂದೂಡಿದೆ.

ಈ ಕುರಿತಂತೆ ಎ.ಮಂಜು ಮತ್ತು ಜಿ. ದೇವರಾಜೇಗೌಡ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ಎ.ಮಂಜು ಪರ ಹಿರಿಯ ವಕೀಲ ಜಿ.ಆರ್.ಗುರುಮಠ ಅವರು, ‘ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್ ಸಮನ್ಸ್ ಜಾರಿಯಾಗಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಲು ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ಈ ಮನವಿ ಬಗ್ಗೆ ಇದೇ 6ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ. ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಜರಾಗಿದ್ದರು.

Post Comments (+)