ಬುಧವಾರ, ಫೆಬ್ರವರಿ 26, 2020
19 °C

ಸಂಸತ್ತಿನಲ್ಲಿನ ಕಾಂಗ್ರೆಸ್‌ ವರ್ತನೆಯೇ ದಿವಾಳಿತನಕ್ಕೆ ಸಾಕ್ಷಿ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಮೇಲೆ ಕಾಂಗ್ರೆಸ್‌ನ ಸಂಸದರು ಸಂಸತ್ತಿನಲ್ಲಿಯೇ ಹಲ್ಲೆಗೆ ಮುಂದಾಗಿದ್ದು, ಕಾಂಗ್ರೆಸ್‌‌ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣವಾಗಿ ನಂಬಿಕೆ ಕಳೆದುಕೊಂಡಿದೆ. ಇದು ಕಾಂಗ್ರೆಸ್‌ನ ದಯನೀಯ ಸ್ಥಿತಿ ತೋರಿಸುತ್ತದೆ. ಆ ಪಕ್ಷಕ್ಕೆ ಮೇಲಿಂದ ಮೇಲೆ ಸೋಲಾಗುತ್ತಿರುವ ಕಾರಣ ಹತಾಶಗೊಂಡಿದೆ’ ಎಂದರು.

‘ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಥರ್ಡ್‌ ಜೂನಿಯರ್‌ ಪಾರ್ಟಿ ಆಗಿದೆ. ಜಾರ್ಖಂಡ್‌ನಲ್ಲಿಯೂ ಜೂನಿಯರ್‌ ಪಾಟ್ನರ್‌ ಆಗಿದೆ. ಕಾಂಗ್ರೆಸ್‌ನ ಸಂಸದರು ಇನ್ನು ಮುಂದಾದರೂ ತಮ್ಮ ವರ್ತನೆ ಸುಧಾರಿಸಿಕೊಳ್ಳಬೇಕು’ ಎಂದು ಹೇಳಿದರು.

ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹಿಂದಿನ ಅನೇಕ ಸಮೀಕ್ಷೆಗಳು ನಮ್ಮ ಪಕ್ಷದ ಪರ ಹಾಗೂ ವಿರುದ್ಧ ಬಂದ ನಂತರ ಫಲಿತಾಂಶ ಬೇರೆ ತೆರನಾಗಿದ್ದ ಅನೇಕ ಉದಾಹರಣೆಗಳು ಇವೆ’ ಎಂದರು.

ಉಳಿದವರಿಗೂ ಸಚಿವ ಸ್ಥಾನ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಬೇರೆ, ಬೇರೆ ಪಕ್ಷಗಳಿಂದ ಬಂದವರು ನೆರವಾಗಿದ್ದಾರೆ. ಅವರಿಗೆ ಮೊದಲು ಸಚಿವ ಸ್ಥಾನ ನೀಡಲಾಗಿದೆ. ಉಳಿದವರಿಗೂ ಸೂಕ್ತ ಸಮಯದಲ್ಲಿ ಸಚಿವ ಸ್ಥಾನ ಕೊಡಲಾಗುತ್ತದೆ. ಉಳಿದ ಮೂರೂ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ಸರ್ಕಾರ ಗಟ್ಟಿಯಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು