ಸೋಮವಾರ, ನವೆಂಬರ್ 18, 2019
28 °C
ಅನರ್ಹ ಶಾಸಕರ ಪರ ಯಡಿಯೂರಪ್ಪ ಬ್ಯಾಟಿಂಗ್ ವಿಚಾರ

ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆದೇ ಇಲ್ಲ: ಪ್ರಹ್ಲಾದ ಜೋಶಿ

Published:
Updated:

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದೇ ಇಲ್ಲ. ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದ ಸಭೆಯಷ್ಟೇ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅನರ್ಹ ಶಾಸಕರ ಪರ ವಹಿಸಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಬಹಿರಂಗವಾದ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಸೋತ ನಮ್ಮ ಅಭ್ಯರ್ಥಿಗಳಿಂದ ಸರ್ಕಾರ ಬರ್ತಿತ್ತಾ; ಯಡಿಯೂರಪ್ಪ ವಿಡಿಯೋ ವೈರಲ್

ಸಭೆಯಲ್ಲಿ ಅನರ್ಹ ಶಾಸಕರ ಬಗ್ಗೆ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರ ಹಾಗೂ ಕಾಂಗ್ರೆಸ್ ದೂರು ವಿಚಾರದ ಬಗ್ಗೆ ಮಾತನಾಡಿ ಈ ಬಗ್ಗೆ ಈಗಾಗಲೇ ಪಕ್ಷದ ಮುಖಂಡರು ಸ್ಪಷ್ಟನೆ‌ ನೀಡಿದ್ದಾರೆ. ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು‌. ಆಗ ಸಿದ್ದರಾಮಯ್ಯ ಹಾಗೂ ದಿನೇಶ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಈಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುವುದರಿಂದ ಈ ರೀತಿ ಕಾಂಗ್ರೆಸ್‌ನವರು ಮಾತನಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಕೆಲಸವಿಲ್ಲದೇ ಕಾಂಗ್ರೆಸ್ ನವರು ಈ ರೀತಿ ಆರೋಪ ಮಾಡುತ್ತಿದ್ದಾರೆ ಅದಕ್ಕೆ ಅರ್ಥವಿಲ್ಲ ಎಂದರು.

ಇದನ್ನೂ ಓದಿ: ಅನರ್ಹ ಶಾಸಕರ ಹೊಣೆ ನಮ್ಮದಲ್ಲ: ಸಚಿವ ಜಗದೀಶ ಶೆಟ್ಟರ್

ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿ.ಕೆ.ಶಿವಕುಮಾರ್ ಕಾರಣ ಎಂಬ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಇದು ಕಾಂಗ್ರೆಸ್‌ನ ಆಂತರಿಕ ವಿಚಾರ. ರಮೇಶ ಜಾರಕಿಹೊಳಿ  ಕಾಂಗ್ರೆಸ್‌ನಲ್ಲಿ ಇದ್ದು ಬಂದವರು. ಅವರಿಗೆ ಕಾಂಗ್ರೆಸ್ ಬಗ್ಗೆ ಎಲ್ಲವೂ ಗೊತ್ತಿದೆ ಹೀಗಾಗಿ ಮಾತನಾಡಿರಬೇಕು ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)