ಬೆಂಗಳೂರು: ಕಾಂಗ್ರೆಸ್– ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯುವುದು ಖಚಿತವಾಗಿದೆ.

‘ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧಿಸುವಂತೆ ಎಚ್.ಡಿ. ದೇವೇಗೌಡರು ಸೂಚನೆ ನೀಡಿದ್ದಾರೆ. ಪಕ್ಷದ ವರಿಷ್ಠರೂ ಸಮ್ಮತಿ ಸೂಚಿಸಿದ್ದಾರೆ’ ಎಂದು ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದೆ. ಆದರೆ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೊಂದಿದೆ. ಈ ಕ್ಷೇತ್ರ ಜೆಡಿಎಸ್‌ಗೆ ಹಂಚಿಕೆಯಾಗಿದ್ದರೂ ಆ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಅವಕಾಶ ಪ್ರಮೋದ್ ಅವರಿಗೆ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.