ಶನಿವಾರ, ಅಕ್ಟೋಬರ್ 19, 2019
27 °C

ಪ್ರಸನ್ನ ಉಪವಾಸ ಅಂತ್ಯ

Published:
Updated:
Prajavani

ಬೆಂಗಳೂರು: ‘ಪವಿತ್ರ ಆರ್ಥಿಕತೆ’ ಜಾರಿಗೆ ಒತ್ತಾಯಿಸಿ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರಂಗಕರ್ಮಿ ಪ್ರಸನ್ನ ಶುಕ್ರವಾರ ನಿರಶನ ಅಂತ್ಯಗೊಳಿಸಿದರು.

ತಿಂಗಳೊಳಗಾಗಿ ಕೇಂದ್ರ ಹಣಕಾಸು ಸಚಿವರೊಂದಿಗೆ ಪ್ರಸನ್ನ ಅವರ ಭೇಟಿಗೆ ಅನುವು ಮಾಡಿಕೊಡುವುದು. ಪವಿತ್ರ ಆರ್ಥಿಕತೆ ಜಾರಿ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಭೇಟಿನೀಡಿದ್ದ ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡ ನೀಡಿದ ಭರವಸೆ ಹಿನ್ನೆಲೆಯಲ್ಲಿ ಉಪವಾಸ ಕೈಬಿಡುವ ನಿರ್ಧಾರ ತೆಗೆದುಕೊಂಡರು.

‘ಗ್ರಾಮ ಸೇವಾ ಸಂಘದ ವತಿಯಿಂದ ಈ ಹೋರಾಟ ನಡೆಯುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಒಳ್ಳೆಯ ಮಾತುಗಳನ್ನಾಡಿದ್ದಾರೆ. ಹೋರಾಟವನ್ನು ಮೆಟ್ಟಿಲುಗಳಂತೆ ಬಳಸಿಕೊಂಡು ಬೇರೆಯವರು ಅಧಿಕಾರಕ್ಕೆ ಬರುವಂತೆ ಮಾಡುವುದು ನಮ್ಮ ಉದ್ದೇಶವಲ್ಲ’ ಎಂದು ಪ್ರಸನ್ನ ಸ್ಪಷ್ಟಪಡಿಸಿದರು.

Post Comments (+)