ಸೋಮವಾರ, ಅಕ್ಟೋಬರ್ 21, 2019
25 °C

ಹೋರಾಟಕ್ಕೆ ದೇವೇಗೌಡ, ಸಿದ್ದರಾಮಯ್ಯ ಬೆಂಬಲ

Published:
Updated:
Prajavani

ಬೆಂಗಳೂರು: ಪವಿತ್ರ ಆರ್ಥಿಕತೆಗೆ ಆಗ್ರಹಿಸಿ ರಂಗಕರ್ಮಿ ಪ್ರಸನ್ನ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿ, ಬೆಂಬಲ ಸೂಚಿಸಿದರು.

ಪ್ರತ್ಯೇಕವಾಗಿ ಬಂದರೂ ಇಬ್ಬರು ನಾಯಕರು ಒಂದೇ ಸಮಯಕ್ಕೆ ಉಪವಾಸ ಸ್ಥಳಕ್ಕೆ ಬಂದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮಂತಹ ಹೋರಾಟಗಾರರ ಅವಶ್ಯಕತೆಯಿದೆ. ಹೋರಾಟಕ್ಕೆ ದೇಹದಲ್ಲಿ ಸಕ್ಕರೆ ಅಂಶವೂ ಸಮತೋಲನದಲ್ಲಿರಬೇಕು‌‌. ಮುಂದಿನ ಹೋರಾಟಕ್ಕೆ ನೀವು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟು, ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

‘ಪ್ರಸನ್ನ ಅವರು ನಾಲ್ಕೈದು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಅವರ ಆರೋಗ್ಯ ಕ್ಷೀಣಿಸುತ್ತಿದ್ದರೂ ಸರ್ಕಾರ ಇತ್ತ ಗಮನವೇ ಹರಿಸದಿರುವುದು ಸರಿಯಲ್ಲ’ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)