ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ವಾರಂಟ್‌

Last Updated 23 ಫೆಬ್ರುವರಿ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು: ಚಲನನಚಿತ್ರ ನಟ ಪ್ರಕಾಶ್‌ ರಾಜ್‌ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು–ಕೊಡಗು ಸಂಸದ ಪ್ರತಾಪ ಸಿಂಹ ವಿರುದ್ಧ ನಗರದ, ‘ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ‘ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಪ್ರತಾಪ ಸಿಂಹ ವಿರುದ್ಧ ಪ್ರಕಾಶ್‌ ರಾಜ್‌ ದಾಖಲಿಸಿರುವ ಪ್ರಕರಣವನ್ನು ನ್ಯಾಯಾಧೀಶ ಬಿ.ವಿ.ಪಾಟೀಲ ಅವರು ಶನಿವಾರ ವಿಚಾರಣೆ ನಡೆಸಿದರು. ಈ ವೇಳೆ ಪ್ರತಾಪ ಸಿಂಹ ವಿಚಾರಣೆಗೆ ಗೈರು ಹಾಜರಾಗಿದ್ದರು. ಅಷ್ಟೇ ಅಲ್ಲ ಅವರನ್ನು ಪ್ರತಿನಿಧಿಸುವ ವಕೀಲರೂ ಕೋರ್ಟ್‌ನಲ್ಲಿ ಹಾಜರಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್‌, ಆರೋಪಿಯನ್ನು ಜಾಮೀನುರಹಿತ ವಾರಂಟ್‌ ಅಡಿಯಲ್ಲಿ ಕೋರ್ಟ್‌ಗೆ ಹಾಜರುಪಡಿಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶಿಸಿತು.

ವಿಚಾರಣೆಯನ್ನು ಮಾರ್ಚ್‌ 19ಕ್ಕೆ ಮುಂದೂಲಾಗಿದೆ.

‘ಪ್ರತಾಪ ಸಿಂಹ ನನ್ನ ವೈಯಕ್ತಿಕ ಸಂಗತಿ ಪ್ರಸ್ತಾಪಿಸಿ ಅವಹೇಳನಕಾರಿ ಟ್ವೀಟ್‌ ಮಾಡಿದ್ದಾರೆ’ ಎಂದು ಆರೋಪಿಸಿ ಪ್ರಕಾಶ್‌ ರಾಜ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT