ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಸಚಿವರಿಂದ ಇಲಾಖೆ ದುರ್ಬಳಕೆ: ಪ್ರತಾಪಸಿಂಹ ಆರೋಪ

Last Updated 30 ಏಪ್ರಿಲ್ 2019, 17:32 IST
ಅಕ್ಷರ ಗಾತ್ರ

ಬೆಂಗಳೂರು: ‘ಗೃಹ ಸಚಿವ ಎಂ.ಬಿ.ಪಾಟೀಲ ಅವರು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಪಾಟೀಲ ಹಾಗೂ ಇಲಾಖಾ ಅಧಿಕಾರಿಗಳ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ’ ಎಂದು ಯುವ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಸಂಸದ ಪ್ರತಾಪಸಿಂಹ ಎಚ್ಚರಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಜಾಲತಾಣದಲ್ಲಿ ಒಂದು ಪತ್ರ ಪ್ರಕಟಿಸಿದರು ಎಂಬ ಕಾರಣಕ್ಕೆ ನಮ್ಮ ಪಕ್ಷದ ಹಲವರ ಮೇಲೆ ಎಫ್‌ಐಆರ್ ಹಾಕಿದ್ದರು. ಅದು ಗೃಹ ಸಚಿವರ ಹೆಸರಿನ ನಕಲಿ ಪತ್ರ ಎಂದಾದರೆ ಸೃಷ್ಟಿಕರ್ತರು ಯಾರು ಎಂಬುದನ್ನು ಮೊದಲು ಪತ್ತೆ ಹಚ್ಚಲಿ. ಅದನ್ನು ಬಿಟ್ಟು ಅದನ್ನು ಫಾರ್ವರ್ಡ್ ಮಾಡಿದವರನ್ನೆಲ್ಲಾ ಬಂಧಿಸಿ ಕಿರುಕುಳ ಕೊಡುವುದು ಸರಿಯಲ್ಲ’ ಎಂದರು.

‘ಈ ಪತ್ರದ ಬಗ್ಗೆ ತೋರಿಸಿದಷ್ಟು ಆಸಕ್ತಿಯನ್ನು ಬೇರೆ ಪ್ರಕರಣಗಳ ಬಗ್ಗೆ ಪೊಲೀಸರು ತೋರಿಸುತ್ತಿಲ್ಲ. . ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟವರ ಬಗ್ಗೆ ಕ್ರಮ ಕೈಗೊಂಡಿಲ್ಲ. ಎಂ.ಬಿ.ಪಾಟೀಲರ ಸೇವೆಗೆ ಪೊಲೀಸ್‌ ಇಲಾಖೆ ನಿಂತಿದೆಯಾ ಎಂಬ ಅನುಮಾನ ಮೂಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT