ಶುಕ್ರವಾರ, ಜೂನ್ 5, 2020
27 °C

ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಪ್ರವೀಣ್‌ ಸೂದ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಪ್ರವೀಣ್‌ ಸೂದ್ ಸದ್ಯ ಸಿಐಡಿ ವಿಭಾಗದ ಡಿಜಿಪಿ ಆಗಿದ್ದರು. ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪ್ರವೀಣ್ ಸೂದ್ ಬಿ.ಟೆಕ್ ಪದವೀಧರು. ಬೆಂಗಳೂರು ಕಮಿಷನರ್ ಆಗಿಯೂ ಕೆಲಸ ಮಾಡಿದ್ದಾರೆ. ಶುಕ್ರವಾರ ರಾತ್ರಿಯೇ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ನೀಲಮಣಿ ಎನ್‌. ರಾಜು ಶುಕ್ರವಾರ ನಿವೃತ್ತರಾಗಿದ್ದು ಅವರ ಸ್ಥಾನಕ್ಕೆ ಪ್ರವೀಣ್‌ ಸೂದ್‌ ಅವರನ್ನು ನೇಮಕ ಮಾಡಲಾಗಿದೆ. ನೀಲಮಣಿ ರಾಜ್ಯದ ಮೊದಲ ಮಹಿಳಾ ಡಿಜಿಪಿ ಆಗಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ

1986ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಪ್ರವೀಣ್‌ ಸೂದ್‌ ಅವರು 2022 ಮೇ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ.

ಮೂವರಿಗೆ ಡಿಜಿಪಿಯಾಗಿ ಬಡ್ತಿ...

ಅಲೋಕ್‌ ಕುಮಾರ್‌, ಮೇಘರಿಕ್‌ ಮತ್ತು ಆರ್‌ಪಿ ಶರ್ಮಾ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು