ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಕ್ಕೆ ಒಳಗಾದ 17ರ ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅನುಮತಿ

Last Updated 12 ಮಾರ್ಚ್ 2019, 18:20 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರಕ್ಕೆ ಒಳಗಾದ 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ.

‘ಭ್ರೂಣ ನ್ಯೂನ್ಯತೆಯಿಂದ ಕೂಡಿದೆ. ಆದ್ದರಿಂದ ಗರ್ಭಪಾತಕ್ಕೆ ಅನುಮತಿ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಿದ್ದ ಬಾಲಕಿಯ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ‘ಬಾಲಕಿಯ ತಪಾಸಣೆ ನಡೆಸಿ ವರದಿ ಸಲ್ಲಿಸಿ’ ಎಂದು ವಾಣಿ ವಿಲಾಸ ಆಸ್ಪತ್ರೆ ಹಾಗೂ ಬೆಂಗಳೂರು ವೈದ್ಯಕೀಯ ಕಾಲೇಜು-ಸಂಶೋಧನಾ ಸಂಸ್ಥೆಯ ತಜ್ಞ ವೈದ್ಯರ ತಂಡಕ್ಕೆ ನಿರ್ದೇಶಿಸಿತ್ತು.

ಇದರ ಅನುಸಾರ ಬೆಂಗಳೂರು ವೈದ್ಯಕೀಯ ಕಾಲೇಜು-ಸಂಶೋಧನಾ ಸಂಸ್ಥೆಯ ಪರ ವಕೀಲೆ ಎಂ.ಸಿ.ನಾಗಶ್ರೀ ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ವರದಿ ಸಲ್ಲಿಸಿದರು.

‘ಭ್ರೂಣದ ತಲೆಭಾಗದಲ್ಲಿ ಸೀಳು ಕಾಣಿಸಿಕೊಂಡಿದೆ. ಮಗು ಜನಿಸಿದರೂ ಭವಿಷ್ಯದಲ್ಲಿ ಸಮಸ್ಯೆ ಎದುರಾಗಲಿದೆ. ಆದ್ದರಿಂದ ಗರ್ಭಪಾತ ನಡೆಸುವುದು ಸೂಕ್ತ’ ಎಂದು ವರದಿಯಲ್ಲಿ ಉಲ್ಲೇಖಿಸಲಾದ ಅಂಶವನ್ನು ನ್ಯಾಯಪೀಠ ಮಾನ್ಯ ಮಾಡಿದೆ.

‘ಭ್ರೂಣವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಂರಕ್ಷಿಸಿ ಇಡಬೇಕು ಹಾಗೂ ಅದರ ಡಿಎನ್‌ಎ ಪರೀಕ್ಷೆ ಮಾಡಬೇಕು. ಅರ್ಜಿದಾರಳಿಗೆ ಪರಿಹಾರ ನೀಡುವ ಮತ್ತು ಗರ್ಭಪಾತಕ್ಕೆ ತಗಲುವ ವೆಚ್ಚವನ್ನು ಭರಿಸಬೇಕು ಮತ್ತು ಇದಕ್ಕಾಗಿ ₹ 70 ಸಾವಿರವನ್ನು ತುರ್ತಾಗಿ ಬಿಡುಗಡೆ ಮಾಡುವ ಬಗ್ಗೆ ಉತ್ತರಿಸಿ’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

ಈ ಕುರಿತಂತೆ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT