ಹುಬ್ಬಳ್ಳಿ: ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪನವರ ಅಂತಿಮ ನಮನ ಕಾರ್ಯದ ಸಿದ್ದತೆಗಳನ್ನು ಹುಬ್ಬಳ್ಳಿಯಲ್ಲಿ ವಿಶ್ವೇಶ್ವರನಗರದ ಅವರ ಸ್ವಗೃಹ ಪ್ರಪಂಚದಲ್ಲಿ ಕೈಕೊಳ್ಳಲಾಗುತ್ತಿದೆ.

ಕಿಮ್ಸ್ನಿಂದ ಬೆಳಿಗ್ಗೆ 9 ಗಂಟೆಗೆ ಪಾಪು ಪಾರ್ಥಿವ ಶರೀರವನ್ನು ಅವರ ಸ್ವಗೃಹ ತರಲಾಗುವುದು. ನಂತರ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು.

ಕಂದಾಯ, ಪೊಲೀಸ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಅಂತಿಮ ನಮನದ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.

ಪಾಪು ಅಂತಿಮ ದರ್ಶನಕ್ಕೆ ಬರುತ್ತಿರುವ ಸಾರ್ವಜನಿಕರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಮಾಜಿ ಸಂಸದ ಐ.ಜಿ. ಸನದಿ,ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅಂತಿಮ ದರ್ಶನ ಪಡೆದರು.

ಸಿದ್ಧಾರೂಢ ಮಠ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸಂತರು ಧಾರ್ಮಿಕ ವಿಧಿವಿಧಾನದ ಮೂಲಕ, ಮಂತ್ರಘೋಷ ಹಾಕಿ ಪಾಪು ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಇದನ್ನೂ ಓದಿ:‘ಪ್ರಪಂಚ’ಕ್ಕೆ ಪಾಪು ವಿದಾಯ: ಪಾಟೀಲ ಪುಟ್ಟಪ್ಪ ನಿಧನ

ಇದನ್ನೂ ಓದಿ:ಕನ್ನಡದ ಅಸ್ಮಿತೆಗೆ ಹೋರಾಡಿದ ಒಂಟಿ ಸಲಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.