ಅಧ್ಯಕ್ಷ–ಉಪಾಧ್ಯಕ್ಷ ಮೀಸಲು: ಅಧಿಸೂಚನೆ ಪ್ರಕಟ

7

ಅಧ್ಯಕ್ಷ–ಉಪಾಧ್ಯಕ್ಷ ಮೀಸಲು: ಅಧಿಸೂಚನೆ ಪ್ರಕಟ

Published:
Updated:

ಬೆಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್‌ ಮೀಸಲು ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಸೋಮವಾರ ಪ್ರಕಟಿಸಿದೆ.

ಬೆಳಗ್ಗೆಯಷ್ಟೇ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು, ‘ಪಟ್ಟಿಯನ್ನು ಗೆಜೆಟ್ ಪ್ರಕಟಣೆಗೆ ಕಳುಹಿಸಿಕೊಡಲಾಗಿದೆ’ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದರು.

ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್‌.ಫಣೀಂದ್ರ, ‘ರಾಜ್ಯ ಸರ್ಕಾರ ಇನ್ನೂ ಪಟ್ಟಿ ಸಿದ್ಧಪಡಿಸಿಲ್ಲ’ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಪೀಠ ‘ಸೋಮವಾರ ಮಧ್ಯಾಹ್ನ 1.30ರ ಒಳಗೆ ಪಟ್ಟಿ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತ್ತು. ಇದರ ಬೆನ್ನಲ್ಲೇ ಸಂಜೆ ವೇಳೆಗೆ ಪಟ್ಟಿ ಪ್ರಕಟಿಸಲಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !