ಮಂಗಳವಾರ, ಮಾರ್ಚ್ 31, 2020
19 °C

ರಾಜ್ಯದ ಎಲ್ಲ ಎಟಿಎಂ‌ಗಳಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲಿ: ಎಚ್.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ತಡೆಗೆ ರಾಜ್ಯದ ಎಟಿಎಂಗಳಲ್ಲಿಯೂ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದುರಾದೃಷ್ಟವಶಾತ್ ಕೊರೊನಾ ಸೋಂಕಿತರು ಎಟಿಎಂಗಳಲ್ಲಿ ಹಣ ಡ್ರಾ ಮಾಡಿದರೆ ಅಮಾಯಕರು  ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲ ಬ್ಯಾಂಕುಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ  ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ  ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಯಾವುದೇ ಎಟಿಎಂನಲ್ಲೂ ಸುರಕ್ಷೆ ಇಲ್ಲ. ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಂಗಳಿಗೆ ಬರುತ್ತಾರೆ. ಕೊರೊನಾ ವೈರಸ್‌ ಬಗ್ಗೆ ಮುಂಜಾಗ್ರತಾ ಕ್ರಮವನ್ನು ತಕ್ಷಣವೇ ತೆಗೆದುಕೊಳ್ಳಬೇಕು.
ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು