ಭಾನುವಾರ, ಸೆಪ್ಟೆಂಬರ್ 26, 2021
24 °C

₹ 418 ಕೋಟಿ ಹಾನಿಯ ಪ್ರಾಥಮಿಕ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಜಿಲ್ಲೆಯಲ್ಲಿ ಒಂದು ವಾರ ವ್ಯಾಪಿಸಿದ ಪ್ರವಾಹದಿಂದ ಆಸ್ತಿಪಾಸ್ತಿಗಳಿಗೆ ಒಟ್ಟು ₹ 418 ಕೋಟಿ ಹಾನಿಯಾಗಿದೆ ಎಂದು ವಿವಿಧ ಇಲಾಖೆಗಳು ಜಿಲ್ಲಾಡಳಿತಕ್ಕೆ ‍ಪ್ರಾಥಮಿಕ ವರದಿ ಸಲ್ಲಿಸಿವೆ. 

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗೀಲ್ ಈ ಕುರಿತು ಮಾಹಿತಿ ನೀಡಿದರು. 

‘ಜಿಲ್ಲೆಯಲ್ಲಿ ಆ.1ರಿಂದ ಆ.12ರವರ ನಡುವೆ ಸರಾಸರಿ 95.8 ಸೆಂಟಿಮೀಟರ್ ಮಳೆಯಾಗಿದೆ. ಇದು ವಾಡಿಕೆಗಿಂತ ಶೇ 223ರಷ್ಟು ಹೆಚ್ಚಾಗಿದೆ. 113 ಗ್ರಾಮಗಳು ಜಲಾವೃತವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6,200 ಜನರನ್ನು ರಕ್ಷಿಸಲಾಗಿದೆ. ಪ್ರಸ್ತುತ 73 ಪರಿಹಾರ ಕೇಂದ್ರಗಳಲ್ಲಿ 8,561 ಜನರು ಆಶ್ರಯ ಪಡೆದಿದ್ದಾರೆ’ ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮಾತನಾಡಿ, ‘ಮುಂದಿನ 48 ಗಂಟೆಗಳಲ್ಲಿ ವಿದ್ಯುತ್, ಮೊಬೈಲ್ ಟವರ್‌ಗಳಿಗೆ ಮರು ಸಂಪರ್ಕ ಕೊಡುವ ಕೆಲಸಗಳು ಪೂರ್ಣಗೊಳ್ಳಲಿವೆ. ಆ.16ರಿಂದ ಬೆಳೆ ಸಮೀಕ್ಷೆ ನಡೆಸಲಾಗುವುದು’ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,005 ಕಿ.ಮೀ ರಸ್ತೆ ಹಾಗೂ 89 ಸೇತುವೆ, ಮೋರಿಗಳು ಹಾಗೂ 38 ಕೆರೆಗಳು ಹಾನಿಯಾಗಿವೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು