ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿ: ಡಾ.ಕೆ.ಸುಧಾಕರ್

Last Updated 7 ಜೂನ್ 2020, 11:17 IST
ಅಕ್ಷರ ಗಾತ್ರ

ಚಿಂತಾಮಣಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ವಸತಿಹೀನರಿಗೆ ವಸತಿ ಕಲ್ಪಿಸಲು ಪ್ರಥಮ ಆದ್ಯತೆ ನೀಡಬೇಕು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾಮಗಾರಿಗಳಲ್ಲಿ ಯಾವುದೇ ಅವ್ಯವಹಾರಗಳು ಹಾಗೂ ಲೋಪದೋಷಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಆಶ್ರಯ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ವಸತಿಹೀನರಿಗೆ ನಿವೇಶನ ಹಂಚಿಕೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಾಲ್ಲೂಕಿನ ಎಲ್ಲ ಆಸ್ಪತ್ರೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಲು ಆದೇಶ ನೀಡಿದರು.

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಮಸ್ಯೆಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಾಧಿಕಾರಿಗೆ ತಿಳಿಸಿ ಪರಿಹರಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕೃಷಿ ಆಧಾರಿತ ರಸಗೊಬ್ಬರ, ಬಿತ್ತನೆ ಬೀಜ, ಕ್ರಮಿನಾಶಕಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕಳಪೆ ಗುಣಮಟ್ಟದ ಔಷಧಿಗಳನ್ನು ರೈತರಿಗೆ ಮಾರಾಟ ಮಾಡುತ್ತಿರುವುದು, ಅಧಿಕ ಬೆಲೆ ವಿಧಿಸುವುದು ಕಂಡುಬಂದರೆ ಕ್ರಮಕೈಗೊಳ್ಳಲು ಸೂಚಿಸಿದರು.

ಸಂಸದ ಎಸ್.ಮುನಿಸ್ವಾಮಿ, ಶಾಸಕ ಎಂ.ಕೃಷ್ಣಾರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಹಲವಾರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT