ಗುರುವಾರ , ಆಗಸ್ಟ್ 5, 2021
26 °C

ಬೆಂಗಳೂರು | 30 ವಿಚಾರಣಾಧೀನ ಕೈದಿಗಳಿಗೂ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 30 ವಿಚಾರಣಾಧೀನ ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆ ಹಾಗೂ ಥಣಿಸಂದ್ರದ ಹಜ್ ಭವನಕ್ಕೆ ಭಾನುವಾರ ಸ್ಥಳಾಂತರಿಸಲಾಗಿದೆ.

ಹಲವು ಅಪರಾಧ ಪ್ರಕರಣಗಳಲ್ಲಿ ನಗರದ ಪೊಲೀಸರು ಬಂಧಿಸಿದ್ದ 100ಕ್ಕೂ ಹೆಚ್ಚು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಅಂದಿನಿಂದಲೇ ಎಲ್ಲರನ್ನೂ ಕಾರಾಗೃಹದಲ್ಲಿರುವ ಪ್ರತ್ಯೇಕ ಕಟ್ಟಡದಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಅದಕ್ಕೆ ಸಿಬ್ಬಂದಿ ಕಾವಲು ಸಹ ಇತ್ತು.

ಈ ಹಿಂದೆ ಕಾರಾಗೃಹದ 26 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಅದರಲ್ಲಿ ಸಿಬ್ಬಂದಿಯೂ ಇದ್ದರು. ಇದೀಗ ಪುನಃ 30 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಒಬ್ಬರು ಮಹಿಳಾ ಕೈದಿ ಇದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು