ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ: ನ್ಯಾಯಾಲಯದಿಂದ ಜಿಗಿದ ಕೈದಿ ಸಾವು

ಸೋಮವಾರ, ಏಪ್ರಿಲ್ 22, 2019
29 °C

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ: ನ್ಯಾಯಾಲಯದಿಂದ ಜಿಗಿದ ಕೈದಿ ಸಾವು

Published:
Updated:

ಚಿತ್ರದುರ್ಗ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಗಳಿಬ್ಬರು ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿಯೇ ನ್ಯಾಯಾಲಯದ ಮೊದಲ ಅಂತಸ್ತಿನಿಂದ ಜಿಗಿದಿದ್ದಾರೆ. ಈ ಪೈಕಿ ಒಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಹಿರೇಗುಂಟನೂರಿನ ಸುನೀಲ್‌ (35) ಮೃತಪಟ್ಟವ. ಗಾಯಗೊಂಡಿರುವ ವೀರಭದ್ರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪರಾರಿಯಾಗಲು ಯತ್ನಿಸಿದ ಆರೋಪದ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಇವರು ಸೇರಿ ಆರು ಮಂದಿಯನ್ನು ದೋಷಿಗಳೆಂದು ಆದೇಶಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ಅಪರಾಧಿಗಳನ್ನು ಬುಧವಾರ ನ್ಯಾಯಾಲಯಕ್ಕೆ ಕರೆತಂದ ಸಂದರ್ಭದಲ್ಲಿ ಈ ಪ್ರಕರಣ ಸಂಭವಿಸಿದೆ.

ನ್ಯಾಯಾಧೀಶರಾದ ಡಿ.ವೀರಣ್ಣ ಮಧ್ಯಾಹ್ನ 12.30ರ ಸುಮಾರಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಅತ್ಯಾಚಾರ ಹಾಗೂ ಬಾಲ್ಯ ವಿವಾಹಕ್ಕೆ ನೆರವು ನೀಡಿದ ಆರೋಪದ ಮೇರೆಗೆ ಸುನೀಲ್‌ ಹಾಗೂ ವೀರಭದ್ರ ಇಬ್ಬರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲು ಶಿಕ್ಷೆಯಿಂದ ಪಾರಾಗಲು ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !