ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್‌ಗಳ ಸಂಚಾರ, ಶೇ 15 ರಷ್ಟು ದರ ಏರಿಕೆಗೆ ಒಪ್ಪಿಗೆ: ಲಕ್ಷ್ಮಣ ಸವದಿ

Last Updated 22 ಮೇ 2020, 21:37 IST
ಅಕ್ಷರ ಗಾತ್ರ

ರಾಯಚೂರು: ‘ಎರಡು ದಿನಗಳಲ್ಲಿ ಖಾಸಗಿ ಬಸ್‌ಗಳ ಸಂಚಾರ ಆರಂಭವಾಗಲಿವೆ. ಶೇ 15ರಷ್ಟು ದರ ಏರಿಕೆಗೆ ಅವಕಾಶ ನೀಡಲಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಖಾಸಗಿ ವಾಹನಗಳ ಮಾಲೀಕರ ಸಂಘದೊಂದಿಗೆ ಸಭೆ ನಡೆದಿದ್ದು, ಶೇ 50 ದರ ಏರಿಕೆ ಬೇಡಿಕೆ ತಿರಸ್ಕರಿಸಲಾಗಿದೆ‌’ ಎಂದರು.

‘ಸೋಂಕು ತಡೆಗೆ ಸರ್ಕಾರಿ ಬಸ್‌ಗಳಿಗೆ ವಿಧಿಸಲಾಗಿರುವ ನಿಯಮಗಳನ್ನು ಖಾಸಗಿ ಬಸ್‌ಗಳಲ್ಲೂ ಪಾಲನೆಯಾಗಬೇಕು. ಕೆಂಪು ವಲಯ ಹಾಗೂ ಬಫರ್ ಜೋನ್ ಪ್ರದೇಶಗಳ ಪ್ರಯಾಣಿಕರನ್ನು ಕರೆದೊಯ್ಯದಂತೆ ತಿಳಿಸಲಾಗಿದೆ’ ಎಂದರು.

ಶೀಘ್ರ ರಾತ್ರಿ ಪೂರ್ಣಪ್ರಮಾಣದ ಬಸ್‌ ಸೇವೆ (ಹೊಸಪೇಟೆ ವರದಿ): ‘ರಾಜ್ಯದ ಕೆಲವೆಡೆ ಈಗಾಗಲೇ ರಾತ್ರಿ ಬಸ್ ಸಂಚಾರ ಆರಂಭಗೊಂಡಿದೆ. ಶೀಘ್ರದಲ್ಲೇ ರಾಜ್ಯದಾದ್ಯಂತ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ’ ಎಂದು ಸಚಿವ ಸವದಿ ತಿಳಿಸಿದರು.

‘ಮೇ 30ರಂದು ಕೇಂದ್ರದ ಹೊಸ ಮಾರ್ಗಸೂಚಿ ಬರಲಿದೆ. ಅದರ ಆಧಾರದಲ್ಲಿ ರಾತ್ರಿ ಬಸ್ ಸಂಚಾರಕ್ಕೆ ಯಾವ ರೀತಿಯ ವ್ಯವಸ್ಥೆ ಮಾಡಬೇಕು ಎನ್ನುವುದರ ಬಗ್ಗೆ ತೀರ್ಮಾನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT