ಗುರುವಾರ , ಸೆಪ್ಟೆಂಬರ್ 23, 2021
22 °C

ಕೃಷ್ಣ ಜತೆ ಸಚಿವ ಡಿ.ಕೆ.ಶಿವಕುಮಾರ್ ರಹಸ್ಯ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸದಾಶಿವನಗರದ ಎಸ್‌.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.

‘ಎಸ್‌.ಎ.ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಕೋರಲು ಬಂದಿದ್ದೇನೆ. ಅವರೊಂದಿಗೆ ರಹಸ್ಯ ಮಾತುಕತೆಗಳೇನು ನಡೆಸಿಲ್ಲ. ನಾನು ತೆರೆದ ಪುಸ್ತಕವಿದ್ದಂತೆ. ಏನೇ ಮಾತನಾಡುವುದಿದ್ದರೂ ಬಹಿರಂಗವಾಗೇ ಆಡುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ’ ಎಂದು ಶಿವಕುಮಾರ್‌ ಹೇಳಿದರು.

ಡಿ.ಕೆ.ಶಿವಕುಮಾರ್‌ ಅವರು ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಅವರ ಕಾಲಿಗೆ ನಮಸ್ಕರಿಸಿದರು.

‘ನಾನು ಈಗ ಕಾಂಗ್ರೆಸ್ ವಕ್ತಾರನಲ್ಲ. ಕೇವಲ ಕಾರ್ಯಕರ್ತ, ಸಚಿವನಷ್ಟೇ.‌ ನನ್ನ ವಿಷಯಕ್ಕೆ ಮಾತ್ರ ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದು ಜಿಟಿಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲನೆ ಮಾಡಲೇಬೇಕು.‌ ನಾವಂತೂ ಪಾಲನೆ ಮಾಡಿದ್ದೇವೆ.‌ ಅವರೂ ಪಾಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದಷ್ಟೇ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು